ಶಿವಮೊಗ್ಗ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಮತ್ತು ಜಿಲ್ಲಾ ಸಂಘ ಸೇರಿ ಜಿಲ್ಲಾ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ-2025ನ್ನು ಆ. 3ರಂದು ಹಮ್ಮಿಕೊಂಡಿವೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, 3 ರ ಭಾನುವಾರ ಸಂಜೆ 4 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ನಡೆಸುವರು.ಪ್ರತಿಭಾ ಪುರಸ್ಕಾರವನ್ನು ಸಂಸದ ಬಿ.ವೈ. ರಾಘವೇಂದ್ರ ನೀಡುವರು.ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಶಾರದಾ ಪೂರ್ಯಾ ನಾಯ್ಕ ಅತಿಥಿಯಾಗಿರುವರು ಎಂದರು.ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ವಹಿಸುವರು.
ಪ್ರೇರಣಾ ನುಡಿಯನ್ನಾಡಲು ಟಿವಿ 9ನ ಚೀಫ್ ಆಂಕರ್ ರಂಗನಾಥ ಭಾರದ್ವಾಜ್ ಆಗಮಿಸುವರು. ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್ ಉಪಸ್ಥಿತರಿರುವರು ಎಂದರು.
ಎಂಎಲ್ಸಿಗಳಾದ ಡಿ.ಎಸ್ ಅರುಣ್, ಬಲ್ಕಿಶ್ ಬಾನು, ಡಾ!! ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಗುರುದತ್ ಹೆಗಡೆ ಸಿಇಒ ಹೇಮಂತ್, ಎಸ್ ಪಿ ಮಿಥುನ್ ಕುಮಾರ್, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಆಗಮಿಸುವರೆಂದರು.