ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣ ಕಾರ್ಯ ನಡೆಯುತ್ತಿರುವುದಕ್ಕೆ ಹಿಂದೂಪರ ಸಂಘಟನೆಗಳು ಮತ್ತು ಗ್ರಾಮದ ಕೆಲವು ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಚರ್ಚ್ ನಿರ್ಮಿಸಬಾರದು ಎಂದು ಪಟ್ಟು ಹಿಡಿದಿದ್ದಾರೆ.
“ಮೂಡಿಗೆರೆ ಸಮೀಪದ ಹಾಂದಿ ಗ್ರಾಮದ ರಂಗ ಎಂಬುವವರ ಜಮೀನಿನಲ್ಲಿ ಚರ್ಚ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಧಾರ್ಮಿಕ ಮತಾಂತರಗಳನ್ನು ನಡೆಸಲು ಚರ್ಚ್ ನಿರ್ಮಿಸಲಾಗುತ್ತಿದೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.
“ಮೂಡಿಗೆರೆ ಸಮೀಪದ ಹಾಂದಿ ಗ್ರಾಮದ ರಂಗ ಎಂಬ ವ್ಯಕ್ತಿ ಕ್ರಿಶ್ಚಿಯನ್ ಕುಟುಂಬಗಳೇ ಇಲ್ಲದ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣಕ್ಕೆ ಮುಂದಾಗಿದ್ದಾರೆ. ರಂಗ ಎಂಬುವವರೂ ಕೂಡ ಮತಾಂತರ ಹೊಂದಿದವರಾಗಿದ್ದು, ಸರ್ಕಾರದಿಂದ ಮನೆ ಕಟ್ಟಿಸಲು ಮಂಜೂರಾಗಿರುವ ಜಾಗದಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ” ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ; ತನಿಖೆಗೆ ಕರವೇ ಆಗ್ರಹ
ಲೋಕವಳ್ಳಿ ಗ್ರಾಮಕ್ಕೆ ಹಳೆ ಮೂಡಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಭೇಟಿ ನೀಡಿದ್ದಾರೆ. ಚರ್ಚ್ ನಿರ್ಮಾಣ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಗ್ರಾಮಸ್ಥರು ದೂರು ದಾಖಲಿಸಿದ್ದಾರೆ.