ಏ. 1ರವರೆಗೆ ಮೈಸೂರು ರಸ್ತೆ ಮೂಲಕ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್‌

Date:

Advertisements
  • ಏ. 1ರ ಬೆಳಗ್ಗೆ 10 ಗಂಟೆಯವರೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಸೇರಿದಂತೆ ಎಲ್ಲ ವಾಹನಗಳಿಗೆ ನಿರ್ಬಂಧ
  • ಸಾರ್ವಜನಿಕ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಬದಲಿ ರಸ್ತೆಯಲ್ಲಿ ಸಂಚರಿಸಲು ಮನವಿ

ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಾಮವೇಣುಗೋಪಾಲ ಸ್ವಾಮಿ ರಥೋತ್ಸವ ನಡೆಯಲಿದೆ. ಈ ಹಿನ್ನಲೆ, ಮೈಸೂರು ರಸ್ತೆ ಮೂಲಕ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್‌ ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರ ಪೊಲೀಸ್ ಪ್ರಕಟಣೆ ಹೊರಡಿಸಿದೆ.

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ರಾಮವೇಣುಗೋಪಾಲ ಸ್ವಾಮಿ ರಥೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಾರೆ. ಈ ಹಿನ್ನಲೆ, ಸಾರ್ವಜನಿಕ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಏಪ್ರಿಲ್ 1 ರವರೆಗೆ ಸಂಚಾರಕ್ಕಾಗಿ ಬದಲಿ ರಸ್ತೆಯಲ್ಲಿ ಸಂಚರಿಸಲು ಪೊಲೀಸ್ ಇಲಾಖೆ ಮನವಿ ಮಾಡಿದೆ.

ಮಾ. 31ರ ಬೆಳಗ್ಗೆ 8 ಗಂಟೆಯಿಂದ ಏ. 1ರ ಬೆಳಗ್ಗೆ 10 ಗಂಟೆಯವರೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಸೇರಿದಂತೆ ಎಲ್ಲ ವಾಹನಗಳು ಮೈಸೂರು ರಸ್ತೆ ಮೂಲಕ ಬೆಂಗಳೂರು ನಗರ ಪ್ರವೇಶಿಸುವುದು ಮತ್ತು ನಿರ್ಗಮಿಸುವುದನ್ನು ನಿಷೇಧಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ನಾಲ್ವರು ದುಷ್ಕರ್ಮಿಗಳಿಂದ ಅತ್ಯಾಚಾರ; ಬಂಧನ

ಬದಲಿ ಸಂಪರ್ಕ ರಸ್ತೆಗಳು

ಮೈಸೂರು ರಸ್ತೆಯ ಹೊಸ ಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಎಡಕ್ಕೆ ಹೋಗಿ ಟಿಂಬರ್ ಯಾರ್ಡ್ ಮೂಲಕ ಮುನೇಶ್ವರ ಬ್ಲಾಕ್‌ನ 50 ಅಡಿ ರಸ್ತೆಯಲ್ಲಿ ಹೊಸಕೆರೆಹಳ್ಳಿ ಮೂಲಕ ದೇವೇಗೌಡ ವೃತ್ತಕ್ಕೆ ಬಂದು ನಾಯಂಡಹಳ್ಳಿ ಜಂಕ್ಷನ್ ಬಳಿ ಮೈಸೂರು ರಸ್ತೆಯನ್ನು ಸೇರಬಹುದಾಗಿದೆ.

ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ವಿಜಯನಗರದಿಂದ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಮತ್ತು ಬಿಎಚ್‌ಇಎಲ್ ಜಂಕ್ಷನ್‌ನಿಂದ ನಗರಕ್ಕೆ ಹೋಗುವ ವಾಹನಗಳು ಬಾಪೂಜಿ ನಗರ ಜಂಕ್ಷನ್ ಮತ್ತು ಕೆಎಸ್‌ಆರ್‌ಟಿಸಿ ಜಂಕ್ಷನ್‌ನಲ್ಲಿ ತಿರುವು ತೆಗೆದುಕೊಳ್ಳಲು ಅನುಮತಿಯಿಲ್ಲ. ಬದಲಾಗಿ ಅವರು ಮೈಸೂರು ರಸ್ತೆಗೆ ಸಂಪರ್ಕಿಸಲು ಬಾಪೂಜಿ ನಗರದ ಮೇಲ್ಸೇತುವೆಯ ಮೂಲಕ ಹೋಗಬಹುದು ಮತ್ತು ಹೊಸಕೆರೆಹಳ್ಳಿ, ಬನಶಂಕರಿ, ಬ್ಯಾಟರಾಯನಪುರ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಹೊಸ ಗುಡ್ಡದಹಳ್ಳಿ ಜಂಕ್ಷನ್‌ನಲ್ಲಿ ಬಲಕ್ಕೆ ತೆಗೆದುಕೊಂಡು 50 ಅಡಿ ರಸ್ತೆ ಮತ್ತು ದೇವೇಗೌಡ ವೃತ್ತದ ಮೂಲಕ ನಾಯಂಡಹಳ್ಳಿ ಜಂಕ್ಷನ್‌ಗೆ ತಲುಪಬಹುದು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X