ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಮುಕ್ತಿ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜು.30 ರಂದು ಬೆಳಿಗ್ಗೆ 9.30 ಕ್ಕೆ ನಗರದ ಡಿಎಆರ್ ಸಭಾ ಭವನದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಕಾನೂನು ಅರಿವು ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.
ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ಉಪನ್ಯಾಸ ನೀಡುವರು.
ಮುಖ್ಯ ಅತಿಥಿಗಳಾಗಿ ಜಿ ಪಂ ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಜಿ.ಕೆ ಮಿಥುನ್ ಕುಮಾರ್, ಡಿಹೆಚ್ಓ ಡಾ.ನಟರಾಜ್ ಕೆ ಎಸ್, ಡಿಡಿಪಿಐ ಮಂಜುನಾಥ್ ಎಸ್ ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮಂಜುನಾಥ್ ಆರ್, ಪಾಲ್ಗೊಳ್ಳುವರು. ಮುಕ್ತಿ ಸಂಸ್ಥೆಯ ಸುಧಾ. ಜಿ ಉಪನ್ಯಾಸ ನೀಡುವರು.