ಉಡುಪಿ | ಬೈಂದೂರು ಸೋಮೇಶ್ವರ, ದೊಂಬೆ ಕರಾವಳಿ ಮಾರ್ಗ ಕೆಎಸ್ಸಾರ್ಟಿಸಿ ಬಸ್ಸಿಗಾಗಿ ಪ್ರತಿಭಟನೆ

Date:

Advertisements

ಕಟ್ಟಡ ಕಾರ್ಮಿಕರ ಮಹಿಳಾ ಉಪಸಮಿತಿ ಮತ್ತು ಜನವಾದಿ ಮಹಿಳಾ ಸಂಘಟನೆಯ ಸಹಯೋಗದಲ್ಲಿ ಬೈಂದೂರು ತಾಲೂಕಿನ ಗ್ರಾಮೀಣ ಪ್ರದೇಶಗಳಾದ ಬೈಂದೂರು, ಸೋಮೇಶ್ವರ, ದೊಂಬೆ, ಕರಾವಳಿ ಮಾರ್ಗವಾಗಿ ಶಿರೂರಿಗೆ ಸರಕಾರಿ ಬಸ್ಸು ವ್ಯವಸ್ಥೆ ಮಾಡಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿ ಇಂದು ಶಿರೂರು ಗ್ರಾಮ ಪಂಚಾಯತ್ ಎದುರು ಶಿರೂರು ನಾಗರಿಕರಿಂದ ಪ್ರತಿಭಟನೆ ನಡೆಯಿತು.

ಸಿಐಟಿಯು ನಾಯಕರಾದ ಸುರೇಶ್ ಕಲ್ಲಾಗರ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಸರಕಾರಿ ಬಸ್ಸಿನ ಸೇವೆ ಹಾಗೂ ಅದರಲ್ಲಿ ಬಡ ಜನರಿಗೆ ಸಿಗುವ ಸೌಲಭ್ಯಗಳನ್ನು ವಂಚಿತರಾದ ಜನರಿಗೆ ಸಿಗಬೇಕು ಎಂದು ಹೋರಾಟ ನಡೆಯುತ್ತಿದ್ದರೂ ಜಿಲ್ಲಾ ಸಾರಿಗೆ ಪ್ರಾಧಿಕಾರ ಕಾಳಜಿ ವಹಿಸುತ್ತಿಲ್ಲ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಿಗೆ ಪರಮಾಧಿಕಾರ ಇರುವುದರಿಂದ ಜನರಿಗೆ ಅನುಕೂಲವಾಗುವ ಸರಕಾರಿ ಬಸ್ಸು ಗ್ರಾಮೀಣ ಪ್ರದೇಶಗಳಿಗೆ ಆರಂಭಿಸಲು ಕ್ರಮವಹಿಸಬೇಕು ಎಂದು ಹೇಳಿದರು.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶೀಲಾವತಿ ಮಾತನಾಡಿ, ಶಿರೂರು ಮಹಿಳೆಯರಿಗೆ ವಿದ್ಯಾರ್ಥಿಗಳಿಗೆ ನ್ಯಾಯ ಸಿಗದಿದ್ದರೆ ಉಡುಪಿ ಸಾರಿಗೆ ಇಲಾಖೆ ಎದುರು ಧರಣಿ ನಡೆಸಲಾಗುವುದು ಎಂದು ಹೇಳಿದರು.
ಜನವಾದಿ ಮಹಿಳಾ ಸಂಘಟನೆಯ ಬೈಂದೂರು ತಾಲೂಕು ಕಾರ್ಯದರ್ಶಿ ನಾಗರತ್ನ ನಾಡ ಮಾತನಾಡಿ, ಪ್ರವಾಸಿ ತಾಣವಾಗಿರುವ ಸೋಮೇಶ್ವರ,ಕರಾವಳಿ ಶಿರೂರುಗಳನ್ನು ಜಿಲ್ಲಾಡಳಿತ ಕಡೆಗಣಿಸುತ್ತಿದೆ ಎಂದರು.

ಬೈಂದೂರು ಕಟ್ಟಡ ಸಂಘದ ಅಧ್ಯಕ್ಷ ಶ್ರೀ ರಾಜೀವ ಪಡುಕೋಣೆ,ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ರಾಜೇಶ್, ಸಹ ಪದಾಧಿಕಾರಿಗಳಾದ ಶ್ರೀಧರ ದೇವಾಡಿಗ ಉಪ್ಪುಂದ, ಗೊಪಾಲ ಕೃಷ್ಣ, ರೋನಿ ನಜರೆತ್ ಹಾಗೂ ಸಿಡಬ್ಲ್ಯೂಎಫ್ಐ ರಾಜ್ಯ ಸಮಿತಿ ಸದಸ್ಯ ರಮೇಶ್ ಗುಲ್ವಾಡಿ ಉಪಸ್ಥಿತರಿದ್ದರು. ಜನವಾದಿ ಜಿಲ್ಲಾ ಕಾರ್ಯದರ್ಶಿ ಶೀಲಾವತಿ, ಕಟ್ಟಡ ಮಹಿಳಾ ಉಪಸಮಿತಿಯ ನಾಗರತ್ನ ನಾಡ, ಪದ್ಮಾವತಿ ಶಿರೂರು, ಶಾಂತಾ ಉಪ್ಪುಂದ ಮತ್ತು ನಾಗರತ್ನ ಪಡುವರಿ ನೇತೃತ್ವ ವಹಿಸಿದ್ದರು.

ಶಿರೂರು ಪಂಚಾಯತ್ ಉಪಾಧ್ಯಕ್ಷರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಜೊತೆ ಮನವಿ ಸ್ವೀಕರಿಸಿ ಪಂಚಾಯತ್ ಮೂಲಕ ನಿರ್ಣಯ ಅಂಗೀಕರಿಸಿ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು. ಸಾರಿಗೆ ಇಲಾಖೆಯ ಅಧಿಕಾರಿಗಳೂ ಮನವಿ ಸ್ವೀಕರಿಸಿ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುವ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X