ತೆಲಂಗಾಣ ರಾಜ್ಯದ ನಾರಾಯಣಪೇಟೆ ಜಿಲ್ಲೆಯ ಮರಿಕಲ್ ಮಂಡಲ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 11 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಮದ್ಯ ಕುಡಿದ ಮತ್ತಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಜುಲೈ 25ರಂದು ನಡೆದಿದೆ.
11 ವರ್ಷದ ಬಾಲಕಿ 5ನೇ ತರಗತಿಯಲ್ಲಿ ಓದುತ್ತಿದ್ದಳು. ನಾಯಿ ಕಡಿತದ ಘಟನೆಯ ಹಿನ್ನೆಲೆ ಸರ್ಕಾರಿ ಹಾಸ್ಟೆಲ್ನಿಂದ ಇತ್ತೀಚೆಗೆ ಮನೆಗೆ ಬಂದಿದ್ದಳು. ಜುಲೈ 25ರಂದು ಮಧ್ಯಾಹ್ನ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಳು, ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಗಳ ಮೇಲೆ ಮದ್ಯ ಕುಡಿದ ಮತ್ತಿನಲ್ಲಿ ಬಂದ ತಂದೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ʼಅಪ್ಪಾ, ನನಗೆ ಏನೂ ಮಾಡಬೇಡಿʼ ಎಂದು ಮಗು ಅಂಗಲಾಚಿದರೂ ಕೇಳದ ತಂದೆ ಮಗಳ ಮೇಲೆ ಹಲ್ಲೆಗೆ ಮುಂದಾಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ತಿಳಿದು ಬಂದಿದೆ. ಮಗುವಿನ ಕಿರುಚಾಟ ಕೇಳಿದ ಸ್ಥಳೀಯರು ಮನೆಗೆ ಧಾವಿಸಿದರು, ಬಾಲಕಿಗೆ ರಕ್ತಸ್ರಾವ ಆಗುತ್ತಿರುವುದನ್ನು ಕಂಡು ಬಾಲಕಿಯ ತಾಯಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಬಾಲಕಿಯನ್ನು ಮಹೆಬೂಬ್ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದ ಚಿಕಿತ್ಸೆ ನೀಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಮಾರಿಕಲ್ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿ ಮತ್ತು ನಂತರ ಮಹೆಬೂಬ್ನಗರ ಸರ್ಕಾರಿ ಜನರಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ.
ಇದನ್ನೂ ಓದಿ : ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?
ʼಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮಾರಿಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಹಾಗೂ ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕೃತ್ಯ ಎಸಗಿದ ತಂದೆ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ʼಈದಿನʼಕ್ಕೆ ಮಾಹಿತಿ ನೀಡಿದ್ದಾರೆ.