ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ರೋಷನಿ ಟ್ರಸ್ಟ್ ನಲ್ಲಿ ಪ್ರಗತಿಪರ ಸಂಘಟನೆಗಳ ಸಭೆಯಲ್ಲಿ ಅನೇಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಪ್ರಗತಿಪರ ಸಂಘಟನೆಗಳ ಸಭೆಯಲ್ಲಿ ಬೇರೆ ಬೇರೆ ವಿಷಯಗಳು,ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದು, ಹಾನಗಲ್ಲ ಪಟ್ಟಣದಲ್ಲಿ ಅಂಗನವಾಡಿ ಸ್ಥಿತಿಗತಿ, ಕನ್ನಡ ಶಾಲೆಗಳ ದುಸ್ಥಿತಿ, ಮಕ್ಕಳ ಕಲಿಕೆಯಲ್ಲಿ ಹಿನ್ನಡೆಯಗುತ್ತಿರುವ ಕುರಿತು ಚರ್ಚೆ ನಡೆಸಿದರು.
ಹಾನಗಲ್ಲ ಪಟ್ಟಣದಲ್ಲಿ ಬರುವ ಪ್ರಾಥಮಿಕ ಆರೋಗ್ಯ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿವಿಧ ವಿಭಾಗದ ಡಾಕ್ಟರ್, ಸಿಬ್ಬಂದಿಗಳ ಕೊರತೆಯಿಂದ ಜನಸಾಮಾನ್ರಿಗೆ ಸಮಸ್ಯೆ ಉಂಟಾಗುತ್ತಿದ್ದು, ಸರಿಪಡಿಸಲು ಅಧಿವೇಶನದಲ್ಲಿ ಒತ್ತಾಯ, ತಂದು ಎಂಬಿಬಿಎಸ್ ಮುಗಿಸಿದವರು, ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಒಂದು ವರ್ಷ ಸೇವೆ ಸಲ್ಲಿಸಬೇಕು. ಹಾಗೆ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ” ಚರ್ಚೆ ನಡೆಸಿದರು.
“ಎಲ್ಲ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿ, ಮುಂಬರುವ ಅಧಿವೇಶನದಲ್ಲಿ ಈ ವಿಷಯಗಳ ಕುರಿತು ಚರ್ಚೆ ಮಾಡಿ ಬಗೆಹರಿಸಬೇಕು” ಎಂದು ಒತ್ತಾಯಿಸಲು ತೀರ್ಮಾನಿಸಲಾಯಿತು.
ಈ ಸುದ್ದಿ ಓದಿದ್ದೀರಾ? ಹಾವೇರಿ | ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಪರಿಹಾರ ನೀಡಬೇಕು: ರೈತ ಮುಖಂಡ ಹನುಮಂತಪ್ಪ ಕಬ್ಬಾರ್
ಸಭೆಯಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರು, ಹೋರಾಟಗಾರರು, ಭಾಗವಹಿಸಿದ್ದರು.