ಕೇಂದ್ರ ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೋರಾಟ ನಡೆಸಲಿದ್ದು, ಇದರ ಅಂಗವಾಗಿ ಆಗಸ್ಟ್ 4ರಂದು ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.
ರಾಹುಲ್ ಗಾಂಧಿಯವರು ಮಹಾದೇವಪುರ ಕ್ಷೇತ್ರದಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ನಡೆಯುವ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ರಾಹುಲ್ ಗಾಂಧಿ ಜೊತೆ ಪಾದಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ
