ತುಮಕೂರು | ಕೇಂದ್ರ ಕೊಟ್ಟ ಗೊಬ್ಬರ ಕಾಳಸಂತೆಯಲ್ಲಿ ಮಾರಾಟ : ಬಿ .ವೈ.ವಿಜಯೇಂದ್ರ

Date:

Advertisements

ಕೇಂದ್ರ ಸರ್ಕಾರ ರಾಜ್ಯಕ್ಕೆವ ರಸಗೊಬ್ಬರ ರೈತರಿಗೆ ಹಂಚಿಕೆ ಮಾಡದೆ ದಳ್ಳಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಗೊಬ್ಬರಕ್ಕಾಗಿ ದಿನಬೆಳಗ್ಗೆ ಸಾಲುಗಟ್ಟಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ಬೀದಿಪಾಲು ಮಾಡಿದೆ. ರೈತರ ಕಣ್ಣಲ್ಲಿ ನೀರುತರಿಸುವ ಯಾವುದೇ ಸರ್ಕಾರಕ್ಕೆ ಒಳ್ಳೆಯದಾಗುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ರೈತ ಮೋರ್ಚಾ ನೇತೃತ್ವದ ಪ್ರತಿಭಟನೆ ಅಂಗವಾಗಿ ಮಂಗಳವಾರ ತುಮಕೂರು ನಗರದ ಬಿಜಿಎಸ್ ವೃತ್ತದಲ್ಲಿಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದರು.ಜಿಲ್ಲಾಧಿಕಾರಿಕಚೇರಿ ಬಳಿ ಮಾತನಾಡಿದ ವಿಜಯೇಂದ್ರ, ಈ ಬಾರಿ ಮುಂಗಾರುಉತ್ತಮವಾಗಿದೆ ಎಂದು ಹವಾಮಾನ ಇಲಾಖೆ ಮೂರು ತಿಂಗಳ ಮೊದಲೇ ಮುನ್ಸೂಚನೆ ನೀಡಿದ್ದು, ರೈತರಿಗೆ ಗೊಬ್ಬರದ ಬೇಡಿಕೆ ಹೆಚ್ಚಾಗುತ್ತದೆ ಎಂದು ಪೂರಕ ಪೂರ್ವ ಸಿದ್ಧತೆ ಮಾಡಿಕೊಂಡು ಗೊಬ್ಬರ ದಾಸ್ತಾನು ಮಾಡದೆ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡಿ ಅವರು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿಗೆ ತಂದಿದೆ ಎಂದರು.

ರಾಜ್ಯಕ್ಕೆ ಯೂರಿಯಾ ಗೊಬ್ಬರವು 6.30 ಲಕ್ಷಟನ್‌ ಅವಶ್ಯಕತೆ ಇದ್ದು, ಕೇಂದ್ರ ಸರ್ಕಾರ 8.73 ಲಕ್ಷ ಮೆಟ್ರಿಕ್‌ಟನ್‌ ರಸಗೊಬ್ಬರವನ್ನು ಅವಶ್ಯಕತೆಗಿಂಥಾ ಹೆಚ್ಚಾಗಿ ಕರ್ನಾಟಕಕ್ಕೆ ನೀಡಿದೆ. ಈ ಗೊಬ್ಬರವನ್ನು ರೈತರಿಗೆ ನೀಡದೆ ದಳ್ಳಾಳಿಗಳಿಂದ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ.ಕಾಂಗ್ರೆಸ್ ಸರ್ಕಾರ ಇರುವಕಡೆ ದಳ್ಳಾಳಿಗಳು, ಕಾಳಸಂತೆಕೋರರು ತುಂಬಿರುತ್ತಾರೆ.ಆದರೆರೈತರುದುಪ್ಪಟ್ಟು ಹಣಕೊಟ್ಟುಗೊಬ್ಬರ ಕೊಳ್ಳುವಂತಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ತಮ್ಮಕುರ್ಚಿ ಉಳಿಸಿಕೊಳ್ಳಲು ತಿಂಗಳಲ್ಲಿ ನಾಲ್ಕು ಬಾರಿದೆಹಲಿಗೆ ಹೋಗಿ ಸೋನಿಯಾಗಾಂಧಿ, ರಾಹುಲ್‌ಗಾಂಧಿ ಮನೆಯಗೇಟ್‌ಕಾಯುತ್ತಾರೆ.ಆದರೆದೆಹಲಿಯಲ್ಲಿ ಪ್ರಧಾನ ಮಂತ್ರಿ, ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಿರಾಜ್ಯದರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ನಾಲ್ಕು ಬಾರಿಇವರುದೆಹಲಿಗೆ ಹೋಗುತ್ತಾರೆ, ಮೂರು ಬಾರು ಸುರ್ಜೆವಾಲ ಬೆಂಗಳೂರಿಗೆ ಬಂದು,ಇವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕೆ, ಬೇರೆಯವರನ್ನು ಮಾಡಬೇಕೆಎಂದು ಸಭೆ ಮಾಡುತ್ತಾರೆ.ಹೀಗಾಗಿ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹಾಳಾಗಿದೆ.ಇದೊಂದು ಲಜ್ಜೆಗೆಟ್ಟ ಸರ್ಕಾರ.ತಮ್ಮ ಲೋಪ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರ, ಪ್ರಧಾನಿ ಮೋದಿಯವರನ್ನುಟೀಕಿಸುತ್ತಾರೆ.ರಾಜ್ಯದ ಕೃಷಿ ಮಂತ್ರಿಯ ಅವಿವೇಕತನದಿಂದ ಇಂದು ಗೊಬ್ಬರ ಸಮಸ್ಯೆಉಂಟಾಗಿದೆ.ಮಂಡ್ಯ, ಬೆಂಗಳೂರು ಬಿಟ್ಟು ಕೃಷಿ ಮಂತ್ರಿ ಜಿಲ್ಲೆಗಳ ಪ್ರವಾಸ ಮಾಡಿಅಲ್ಲಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿಲ್ಲ. ಮುಖ್ಯಮಂತ್ರಿಕೂಡಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ರೈತರ ಸ್ಥಿತಿಗತಿ ಪರಿಶೀಲಿಸಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು.

 ನಂತರ ವಿಜಯೇಂದ್ರಅವರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಶಾಸಕರಾದ ಶಾಸಕ ಬಿ.ಸುರೇಶ್‌ಗೌಡರು, ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಮಾಜಿ ಸಚಿವಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯಚಿದಾನಂದಗೌಡ, ಮಾಜಿ ಶಾಸಕರಾದ ಮಸಾಲೆ ಜಯರಾಂ, , ಬಿಜೆಪಿ ರೈತ ಮೋರ್ಚಾರಾಜ್ಯಉಪಾಧ್ಯಕ್ಷ ಬ್ಯಾಟರಂಗೇಗೌಡ, ಜಿಲ್ಲಾ ಬಿಜೆಪಿ ಹಿರಿಯಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಪ್ರಧಾನ ಕಾರ್ಯದರ್ಶಿ ಗಂಗರಾಜು, ಮಾಜಿಜಿಲ್ಲಾಧ್ಯಕ್ಷ ಹನುಮಂತೇಗೌಡ, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಮುಖಂಡರಾದ, ಡಿ.ಕೃಷ್ಣಕುಮಾರ್, ಎಸ್.ಡಿ.ದಿಲೀಪ್‌ಕುಮಾರ್, ಬಿ.ಹೆಚ್.ಅನಿಲ್‌ಕುಮಾರ್, ಎಲ್.ಸಿ.ನಾಗರಾಜು, ಬಿ.ಕೆ.ಮಂಜುನಾಥ್, ಸಿ.ಭಾರತಿ, ಚಂದ್ರಶೇಖರಬಾಬು, ಹೆಚ್.ಟಿ.ಭೈರಪ್ಪ, ಭೈರಣ್ಣ, ನಂದೀಶ್, ವಿವಿಧಜಿಲ್ಲಾ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿಭಟನೆಯಲ್ಲಿಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X