ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶ: ನುಹ್‌ನಲ್ಲಿ ಬುಲ್ಡೋಜರ್ ಕ್ರಮ ಸ್ಥಗಿತ

Date:

Advertisements

ಕೋಮು ಗಲಭೆ ಹಿನ್ನೆಲೆಯಲ್ಲಿ ಹರಿಯಾಣದ ನುಹ್‌ನಲ್ಲಿ ನಡೆಯುತ್ತಿದ್ದ ಕಟ್ಟಡ ಧ್ವಂಸ ಕಾರ್ಯವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಆದೇಶದ ಮೇರೆಗೆ ಇಂದು (ಆಗಸ್ಟ್‌ 7) ಸ್ಥಗಿತಗೊಳಿಸಲಾಗಿದೆ.

ನುಹ್‌ನಲ್ಲಿನ ಬುಲ್ಡೋಜರ್ ಕ್ರಮದ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ನ್ಯಾಯಮೂರ್ತಿ ಜಿ ಎಸ್ ಸಂಧವಾಲಿಯಾ ಮತ್ತು ನ್ಯಾಯಮೂರ್ತಿ ಹರ್‌ಪ್ರೀತ್ ಕೌರ್ ಜೀವನ್ ಅವರ ವಿಭಾಗೀಯ ಪೀಠವು ಕ್ರಮವನ್ನು ಸ್ಥಗಿತಗೊಳಿಸುವಂತೆ ಆದೇಶಿಸಿತು. ಅಲ್ಲದೆ ಹರಿಯಾಣ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಉತ್ತರವನ್ನು ಕೇಳಿದೆ.

ಹೈಕೋರ್ಟ್ ತೀರ್ಪಿನ ನಂತರ ಬುಲ್ಡೋಜರ್ ಕ್ರಮವನ್ನು ನಿಲ್ಲಿಸುವಂತೆ ಜಿಲ್ಲಾಧಿಕಾರಿ ಧೀರೇಂದ್ರ ಖಡ್ಗಟಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಹರಿಯಾಣದಲ್ಲಿ ಕೋಮು ಗಲಭೆಯಲ್ಲಿ 6 ಮಂದಿ ಸಾವಿಗೀಡಾದ ಒಂದು ವಾರದ ನಂತರ ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ಈ ವಿಷಯವನ್ನು ಕೈಗೆತ್ತಿಕೊಂಡಿದೆ.

Advertisements

ಬುಲ್ಡೋಜರ್ ಕ್ರಮ ತೆಗೆದುಕೊಂಡಿರುವ ಜಿಲ್ಲಾಡಳಿತ ಕಳೆದ ನಾಲ್ಕು ದಿನಗಳಲ್ಲಿ 350 ಗುಡಿಸಲುಗಳು ಮತ್ತು 50 ಕಟ್ಟಡಗಳನ್ನು ಧ್ವಂಸಗೊಳಿಸಿದೆ.

ಈ ಸುದ್ದಿ ಓದಿದ್ದೀರಾ? 2 ಕೋಟಿ ರೂ. ನೀಡುವಂತೆ ಆಸ್ಕರ್‌ ಪ್ರಶಸ್ತಿ ವಿಜೇತ ನಿರ್ಮಾಪಕರಿಗೆ ಮಾವುತ ದಂಪತಿಯಿಂದ ನೋಟಿಸ್

ವಿಪಕ್ಷಗಳ ಆಕ್ರೋಶ

ಧ್ವಂಸ ಕಾರ್ಯಾಚರಣೆಯು ಟೀಕೆಗೆ ಒಳಗಾಗಿತ್ತು. ಇದು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಹೈದರಾಬಾದ್ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಧ್ವಂಸ ಕಾರ್ಯಾಚರಣೆಯ ಬಗ್ಗೆ ಹರಿಯಾಣದ ಮನೋಹರ್ ಲಾಲ್ ಖಟ್ಟರ್ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.

ಶಿಕ್ಷೆಯನ್ನು ನೀಡಲು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಒಂದು ಸಮುದಾಯದ ಕಟ್ಟಡಗಳನ್ನು ಕೆಡವಲಾಗುತ್ತಿದೆ. ಖಟ್ಟರ್ ಸರ್ಕಾರವು ನ್ಯಾಯಾಲಯದ ಹಕ್ಕುಗಳನ್ನು ಕಸಿದುಕೊಂಡಿದ್ದು, ಸೈದ್ಧಾಂತಿಕವಾಗಿ ಬಿಜೆಪಿ ಹಾಗೂ ಸಂಘ ಪರಿವಾರಕ್ಕೆ ಹತ್ತಿರವಾಗಿರುವವರಿಗೆ ನ್ಯಾಯ ನೀಡುತ್ತಿದೆ ಎಂದು ಓವೈಸಿ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಕೋಮುಗಲಭೆ ಪೀಡಿತ ಪ್ರದೇಶಗಳಲ್ಲಿ ಉದ್ವಿಗ್ನತೆ ಮುಂದುವರಿದಿದ್ದು,ಈ ಪ್ರದೇಶಗಳಲ್ಲಿ ಕರ್ಫ್ಯೂ ಹೇರಲಾಗಿದೆ. ಅರೆಸೇನಾ ಪಡೆಗಳು ಭದ್ರತೆ ಒದಗಿಸಿವೆ. ಇಂದು ಬೆಳಗ್ಗೆ ನಾಲ್ಕು ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಗಿತ್ತು. ಪ್ರದೇಶದಲ್ಲಿ ಇಂಟರ್ನೆಟ್ ನಿಷೇಧವು ಜಾರಿಯಲ್ಲಿದೆ.

ಘಟನೆಗೆ ಸಂಬಂಧಿಸಿದಂತೆ 150 ಕ್ಕೂ ಹೆಚ್ಚು ಜನರನ್ನು ಬಂಧಿಸಿ 56 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ನುಹ್ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Download Eedina App Android / iOS

X