ಉಡುಪಿ ಜಿಲ್ಲೆಯ ಮಲ್ಪೆ ಸಮುದ್ರ ತೀರದಲ್ಲಿ ಯುವಕನ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಗದಗ ಮೂಲದ ಗಿರೀಶ್ ಪಾಟೀಲ್ ಎಂದು ಗುರುತಿಸಲಾಗಿದೆ.
ಈ ದುರ್ಘಟನೆಯ ಮಾಹಿತಿ ಲಭಿಸುತ್ತಿದಂತೆ, ಸಮಾಜಸೇವಕ ನಿತ್ಯಾನಂದ ಒಳಕಾಡುವರು ತಕ್ಷಣ ಸ್ಥಳಕ್ಕೆ ಧಾವಿಸಿ, ಶವವನ್ನು ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಸಾಗಿಸಿ ಶವಾಗಾರದಲ್ಲಿ ಇರಿಸುವಂತೆ ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ಇದೇ ವೇಳೆ ಮಲ್ಪೆ ಪೊಲೀಸ್ ಠಾಣೆಗೆ ಕೂಡ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.