ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಆಗಸ್ಟ್‌ 1ಕ್ಕೆ ತೀರ್ಪು ಮುಂದೂಡಿದ ಕೋರ್ಟ್

Date:

Advertisements

ಹಲವಾರು ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಅಶ್ಲೀಲ ವಿಡಿಯೋ ಪ್ರಕರಣ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಪ್ರಕರಣವೊಂದರ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪೂರ್ಣಗೊಳಿಸಿದೆ. ಇಂದು ಪ್ರಕಟವಾಗಬೇಕಿದ್ದ ತೀರ್ಪನ್ನು ಆಗಸ್ಟ್‌ 1ರಂದು ಹೊರಡಿಸುವುದಾಗಿ ಮುಂದೂಡಿದೆ.

ಪ್ರಜ್ವಲ್ ರೇವಣ್ಣ ಸಂಸದನಾಗಿದ್ದ ಸಮಯದಲ್ಲಿ ಹಲವಾರು ಹೆಣ್ಣುಮಕ್ಕಳು ಮತ್ತು ಮಹಿಳೆಯರನ್ನು ಬೆದರಿಸಿ, ಆಮಿಷವೊಡ್ಡಿ ತನ್ನ ಕಾಮಕೃತ್ಯಕ್ಕೆ ಬಳಸಿಕೊಂಡಿದ್ದು, ಅತ್ಯಾಚಾರ ಎಸಗಿದ್ದರು. ತನ್ನ ಕೃತ್ಯಗಳನ್ನು ತಾನೇ ವಿಡಿಯೋ ಮಾಡಿಕೊಂಡಿದ್ದರು. ಪ್ರಜ್ವಲ್‌ನ ಕೃತ್ಯಗಳ ವಿಡಿಯೋಗಳುಳ್ಳ ಪೆನ್‌ಡ್ರೈವ್ 2024ರ ಲೋಕಸಭಾ ಚುನಾವಣೆ ವೇಳೆ ಹಾಸನದಾದ್ಯಂತ ದೊರೆತಿದ್ದವು. ಬಳಿಕ ಪ್ರಜ್ವಲ್ ವಿರುದ್ಧ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಈ ನಾಲ್ಕು ಪ್ರಕರಣಗಳ ಪೈಕಿ, ಕೆ.ಆರ್ ನಗರದ ಸಂತ್ರಸ್ತೆ (ಮನೆ ಕೆಲಸದ ಮಹಿಳೆ) ಮೇಲಿನ ಅತ್ಯಾಚಾರ ಮತ್ತು ಅಪಹರಣ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 26 ಸಾಕ್ಷಿಗಳ ಹೇಳಿಕೆಗಳು ಹಾಗೂ ಪರ-ವಿರೋಧ ವಾದಗಳನ್ನು ಆಲಿಸಿದೆ. ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ಇಂದು ತೀರ್ಪು ನೀಡುವುದಾಗಿ ತಿಳಿಸಿತ್ತು.

ಆದಾಗ್ಯೂ, ಪ್ರಕರಣದಲ್ಲಿ ಒದಗಿಸಿರುವ ಗೂಗಲ್ ಮ್ಯಾಪ್ ಮತ್ತು ಎಫ್‌ಎಸ್‌ಎಲ್‌ ವರದಿಯ ಬಗ್ಗೆ ಸ್ಪಷ್ಟನೆ ಬೇಕೆಂದು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಹೇಳಿದ್ದಾರೆ. ಸ್ಪಷ್ಟನೆ ನೀಡುವಂತೆ ತನಿಖಾಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಾಗಿ, ತೀರ್ಪನ್ನು ಆಗಸ್ಟ್‌ 1ಕ್ಕೆ ಮುಂದೂಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು...

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

Download Eedina App Android / iOS

X