ಕೇಂದ್ರ ಸೇವೆಗೆ ಪ್ರಣಬ್ ಮೊಹಂತಿ? ಧರ್ಮಸ್ಥಳ ಪ್ರಕರಣದ ನೂತನ ಎಸ್‌ಐಟಿ ಮುಖ್ಯಸ್ಥರು ಯಾರಾಗಲಿದ್ದಾರೆ?

Date:

Advertisements

ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚೆಗೆ ಸಭೆ ನಡೆಸಿದ ಕೇಂದ್ರ ಸರ್ಕಾರದ ನೇಮಕಾತಿಗಳ ಸಂಪುಟ ಸಮಿತಿಯು, ವಿವಿಧ ರಾಜ್ಯಗಳಲ್ಲಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಯ ಅರ್ಹರ ಪಟ್ಟಿಗೆ ಆಯ್ಕೆ ಮಾಡಿದೆ. ಸಿಬಿಐ, ಎನ್‌ಎಐ ಸೇರಿ ಕೇಂದ್ರ ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳ ಮಹಾನಿರ್ದೇಶಕ ಹುದ್ದೆಗೆ ಈ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬಹುದಾಗಿದೆ. ಈ ಪಟ್ಟಿಯಲ್ಲಿ 35 ಅಧಿಕಾರಿಗಳಿದ್ದು, ಕರ್ನಾಟಕದಿಂದ ಪ್ರಣಬ್ ಮೊಹಂತಿ ಮಾತ್ರ ಇದ್ದಾರೆ.

ಧರ್ಮಸ್ಥಳ ಗ್ರಾಮದ ವಿವಿಧೆಡೆ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೋರ್ವ ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ರಚಿಸಿರುವ ಎಸ್‌ಐಟಿಯನ್ನು ಪ್ರಣಬ್ ಮೊಹಂತಿ ಅವರು ಮುನ್ನಡೆಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ಎಸ್ಐಟಿ ಗೆ ಬೇರೆ ಅಧಿಕಾರಿಯ ನೇಮಕ ಕುರಿತು ಚರ್ಚೆ: ಡಾ. ಜಿ ಪರಮೇಶ್ವರ್‌
ಪ್ರಣಬ್ ಮೊಹಂತಿ ಅವರು ಕೇಂದ್ರ ಸೇವೆಗೆ ನೇಮಕವಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು, ಮೊಹಾಂತಿಯವರು ಕೇಂದ್ರ ಸೇವೆಗೆ ಹೋದರೆ ಬೇರೆ ಅಧಿಕಾರಿಯನ್ನು ಎಸ್ಐಟಿ ಗೆ ನೇಮಕ ಮಾಡುವ ಬಗ್ಗೆ ಚರ್ಚೆ
ಮಾಡುತ್ತೇವೆ. ಕಾನೂನು ಪ್ರಕಾರ ನಡೆದುಕೊಳ್ಳುತ್ತೇವೆ. ಕೇಂದ್ರಕ್ಕೆ ಹೋದರೂ ಎಸ್ಐಟಿಯಲ್ಲಿ ಇರಲು ಅವಕಾಶ ಇದೆಯಾ ಎಂದೂ ಪರಿಶೀಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರ ಆಶೀರ್ವಾದದಿಂದ ಎಂಟು ಬಾರಿ ದಸರಾದಲ್ಲಿ ಪಾಲ್ಗೊಂಡಿರುವುದು ನನ್ನ ಸೌಭಾಗ್ಯ: ಸಿದ್ದರಾಮಯ್ಯ

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ...

ಒಳ ಮೀಸಲಾತಿ | ಎಐಸಿಸಿ ಹಸ್ತಕ್ಷೇಪಕ್ಕೆ ಹೆಚ್ಚಿದ ಆಗ್ರಹ, ದೆಹಲಿ ಬಿಡದಿರಲು ಅಲೆಮಾರಿ ಸಂಸತ್ತು ತೀರ್ಮಾನ

ಒಳ ಮೀಸಲಾತಿ ವಿತರಣೆಯಲ್ಲಿ ಕರ್ನಾಟಕದ ಅಸ್ಪೃಶ್ಯ ದಲಿತ ಅಲೆಮಾರಿ ಸಮುದಾಯಗಳಿಗೆ ಆಗಿರುವ...

ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತ ಅವಮಾನಿಸಿದ ಮೋದಿ: ಬಿ ಕೆ ಹರಿಪ್ರಸಾದ್‌ ಕಿಡಿ

ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ...

ಮೈಸೂರು ದಸರಾ | ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ...

Download Eedina App Android / iOS

X