ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದನ್ನು ನಿರ್ಬಂಧಿಸಿರುವುದು ಮತ್ತು ನಿಷೇಧಿಸಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿದವು.
ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಕುರಿಗಳೊಂದಿಗೆ ಕುರಿಗಾಹಿಗಳು ಮತ್ತು ರೈತ ಹೋರಾಟಗಾರರು ಮರಿಯಮ್ಮನ ವೃತ್ತದಿಂದ ತಹಶೀಲ್ದಾರ್ ಕಾರ್ಯಾಲಯದವರೆಗೆ ಮೆರವಣಿಗೆ ಮೂಲಕ ಸಾಗಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
“ಅರಣ್ಯ ಸಚಿವ ಈಶ್ವರ ಖಂಡ್ರೆ, ಕೂಡಲೇ ಸೂಚನೆಯನ್ನು ಹಿಂಪಡೆಯಬೇಕು ಹಾಗೂ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ಸರ್ಕಾರ ಆಗಸ್ಟ್ ತಿಂಗಳಿನಲ್ಲಿ ನಡೆಯುವ ಅಧಿವೇಶನದಲ್ಲಿ ಚರ್ಚಿಸಿ ಜಾರಿಗೆ ತರಬೇಕು” ಎಂದು ಮನವಿಯಲ್ಲಿ ಉಲ್ಲೇಖಿಸಿರುವ ಅವರು, “ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿ ಮಾಡುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ” ಎಂದರು.
ಇದನ್ನೂ ಓದಿ: ಧಾರವಾಡ | ದೃಶ್ಯಕಲಾ ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಸಿದ್ದಣ್ಣ ತೇಜಿ, ಧಾರವಾಡ ಜಿಲ್ಲಾಧ್ಯಕ್ಷ ರವಿರಾಜ್ ಕಂಬಳಿ, ಹೆಚ್‌ಕೆ ದೊಡಮನಿ, ಮಾಣಿಕ್ಯಾ, ಯಲ್ಲಪ್ಪ ನರಗುಂದ, ಮಂಜುನಾಥ, ಕಲ್ಲಪ್ಪ ಸೇರಿದಂತೆ ಇತರ ರೈತ ಮುಖಂಡರು, ಕುರಿಗಾಹಿಗಳು ಉಪಸ್ಥಿತರಿದ್ದರು.