ಆರು ವರ್ಷದ ಬಾಲಕಿ ಮೇಲೆ 65 ವರ್ಷದ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದ್ದು, ಈ ಕುರಿತು ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆಯಲ್ಲಿ ಜುಲೈ 30ರಂದು ಪೋಕ್ಸೊ ಪ್ರಕರಣ ದಾಖಲಾಗಿದೆ.
ಸಿರವಾರ ತಾಲ್ಲೂಕಿನ ಕವಿತಾಳ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಖಾಸಗಿ ಶಾಲೆಯಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಅದೇ ಗ್ರಾಮದ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಿ ಬಾಲಕಿಯ ಪೋಷಕರು ದೂರು ನೀಡಿದ್ದಾರೆ.
ಸಂತ್ರಸ್ತೆ ಬಾಲಕಿ ಹಾಗೂ ಅತ್ಯಾಚಾರ ಎಸಗಿದ ಆರೋಪಿಯ ಮೊಮ್ಮಗ ಇಬ್ಬರೂ ಒಂದೇ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದರು. ಬಾಲಕಿಯು ಆರೋಪಿಯ ಮೊಮ್ಮಗನ ಜೊತೆ ಅವರ ಮನೆಗೆ ಹೋಗಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಬಟ್ಟೆ ಬಿಚ್ಚಿ ವೃದ್ಧ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಆಟೋ ಪಲ್ಟಿ ಹಲವರಿಗೆ ಗಾಯ
ಪೋಕ್ಸೊ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.