ಆಟೋ ಪಲ್ಟಿಯಾಗಿ ಹಲವರಿಗೆ ಗಾಯಗೊಂಡ ಘಟನೆ ಮಾನ್ವಿ ತಾಲ್ಲೂಕಿನ ಕುರ್ಡಿ ಕ್ರಾಸ್ ಬಳಿ ಸಂಜೆ ವೇಳೆ ನಡೆದಿದೆ.
ಪ್ರಾಥಮಿಕ ಮಾಹಿತಿಯಂತೆ ಆಟೋ ಚಲಿಸುತ್ತಿದ್ದ ವೇಳೆ ಟೈರ್ ಪಂಚರ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ್ದು, ಇದು ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಕೂಲಿ ಕೆಲಸ ಮುಗಿಸಿಕೊಂಡು ಮಾನ್ವಿ ತಾಲ್ಲೂಕು ಕೊರವಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಸಂಭವಿಸಿದೆ ಎನ್ನಲಾಗಿದೆ. ಸುಮಾರು 25ಕ್ಕೂ ಹೆಚ್ಚು ಜನರು ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳಿಗೆ ರಾಯಚೂರು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಗೊಬ್ಬರ ಕಾಳಸಂತೆ ; 79 ಟನ್ ಯೂರಿಯಾ ಮಾರಾಟ ಆರೋಪ
ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
