ಕೊಪ್ಪಳದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಮಾಜಿ ಹೊರಗುತ್ತಿಗೆ ನೌಕರ ಕಳಕಪ್ಪ ಅವರ ನಗರದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಇಲ್ಲಿನ ಪ್ರಗತಿ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕಳಕಪ್ಪ ಅಕ್ರಮಗಳ ವಿರುದ್ದ ಕಳೆದ ವಾರ ಅದೇ ಇಲಾಖೆಯ ಕೆಲವರು ದೂರು ಕೊಟ್ಟಿದ್ದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವೀಯತೆಯ ಪಸೆ ಉಳಿದಿದೆಯೇ ತುಸುವಾದರೂ?
ಚರಂಡಿ ಹಾಗೂ ಕುಡಿಯುವ ನೀರು ಕಾಮಗಾರಿಯಲ್ಲಿ ವ್ಯಾಪಕ ಅಕ್ರಮವಾಗಿದೆ ಎಂದು ದೂರು ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಕಳೆದ ಕೆಲ ದಿನಗಳ ಹಿಂದೆ ಹೊರಗುತ್ತಿಗೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ಸದ್ಯಕ್ಕೆ ಲಭ್ಯವಾಗಿರುವ ದಾಖಲೆಗಳ ಪ್ರಕಾರ ಕಳಕಪ್ಪ ಬಳಿ 20 ಹೆಚ್ಚು ನಿವೇಶನ ಹಾಗೂ ಮನೆಗಳ ದಾಖಲೆಗಳು ಲಭ್ಯವಾಗಿವೆ ಎಂದು ಮೂಲಗಳು ತಿಳಿಸಿವೆ.