ಅನಾರೋಗ್ಯ | ರಾಜ್ಯಸಭಾ ಕಲಾಪಕ್ಕೆ ಎಚ್‌ ಡಿ ದೇವೇಗೌಡ ಗೈರು

Date:

Advertisements

ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ನಡೆದ ಮಹತ್ವದ ರಾಜ್ಯಸಭೆಯ ಕಲಾಪದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಗೈರು ಹಾಜರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಎಚ್‌ ಡಿ ದೇವೇಗೌಡ, ‘ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ಮಹತ್ವದ ಸಭೆ ಆಯೋಜಿಸಲಾಗಿತ್ತು. ಸೊಂಟ ನೋವಿನ ಹಿನ್ನೆಲೆಯಲ್ಲಿ ಬಹಳ ಹೊತ್ತು ಆ ಸಭೆಯಲ್ಲಿ ಭಾಗವಹಿಸಲಾಗಲಿಲ್ಲ. ಮಹತ್ವದ ಸಭೆಯಾಗಿದ್ದರಿಂದ ಹತ್ತು ನಿಮಿಷವಷ್ಟೇ ಸಭೆಯಲ್ಲಿ ಕೂತಿದ್ದೆ. ಆ ನಂತರ ವೈದ್ಯರಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗಿ ವಿಶ್ರಾಂತಿ ಪಡೆಯುತ್ತಿದ್ದೇನೆ. ನೋವು ಕಡಿಮೆಯಾದರೆ ಬುಧವಾರ ನಡೆಯಲಿರುವ ಕಲಾಪದಲ್ಲಿ ಭಾಗವಹಿಸಲು ಶ್ರಮಿಸುತ್ತೇನೆ’ ಎಂದು ತಿಳಿಸಿದ್ದಾರೆ.

ವಿವಾದಾತ್ಮಕ ದಿಲ್ಲಿ ಸೇವೆಗಳ ಮಸೂದೆಯನ್ನು ಸೋಮವಾರ ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಗಿತ್ತು. ಐದೂವರೆ ಗಂಟೆಗಳ ಕಾಲ ನಡೆದ ವಾಕ್ಸಮರದ ಬಳಿಕ ಮಸೂದೆ ಕೇಂದ್ರ ಸರ್ಕಾರದ ಪರವಾಗಿತ್ತು.

Advertisements

ಮತದಾನ ನಡೆಯಲಿದ್ದ ಹಿನ್ನೆಲೆಯಲ್ಲಿ ವಯೋ ಸಹಜ ಅನಾರೋಗ್ಯದ ನಡುವೆಯೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜ್ಯಸಭೆಗೆ ವೀಲ್‌ಚೇರ್‌ನಲ್ಲಿ ಬಂದು ಕಲಾಪದಲ್ಲಿ ಭಾಗವಹಿಸಿದ್ದರು. ಆದರೆ ಇದನ್ನು ಬಿಜೆಪಿ ಟೀಕೆ ಮಾಡಿ, ಟ್ವೀಟ್ ಮಾಡಿದೆ.

ಅನುಮಾನ: ವಿವಾದಾತ್ಮಕ ದಿಲ್ಲಿ ಸೇವೆಗಳ ಮಸೂದೆಯನ್ನು ರಾಜ್ಯಸಭೆಯಲ್ಲಿ ಸೋಮವಾರ ಮತಕ್ಕೆ ಹಾಕಲಾಗಿತ್ತು. ಈ ಮಸೂದೆಯ ಪರವಿರುವುದು ಎನ್‌ಡಿಎ ಬೆಂಬಲಿಸಿದಂತಾಗುತ್ತದೆ, ವಿರೋಧಿಸುವುದು ಇಂಡಿಯಾ ಒಕ್ಕೂಟಗಳೊಂದಿಗೆ ಗುರುತಿಸಿಕೊಂಡಂತಾಗುತ್ತದೆ. ದೇವೇಗೌಡರು ಆರೋಗ್ಯದ ನೆಪ ಹೇಳಿ ಭಾಗವಹಿಸದಿರುವುದು, ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ರಾಜಕೀಯ ನಾಯಕರು ಹೇಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X