ಅನೇಕ ಪ್ರಕರಣಗಳಲ್ಲಿ ಸಾಕ್ಷಿಗಳಿದ್ದರೂ ಕೂಡ ತದ್ವಿರುದ್ಧವಾಗಿ ತೀರ್ಪು ಪ್ರಕಟವಾಗಿರುವ ಉದಾಹರಣೆಗಳು ಇವೆ. ಮಾಲೆಗಾಂವ್ ಪ್ರಕರಣಗಳಲ್ಲೂ ಹೀಗೆ ಆಗಿದೆ ಎಂದು ಎನ್‌ಐಎ ಕೋರ್ಟ್ ತೀರ್ಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಮಾಲೆಗಾಂವ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ ವಿಚಾರಕ್ಕೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಆದೇಶದ ಬಗ್ಗೆ ನಾನು ಸಂಪೂರ್ಣವಾಗಿ ನೋಡಿಲ್ಲ. ಆದರೆ ಇತ್ತೀಚೆಗೆ ಯಾವ ರೀತಿಯ ತೀರ್ಪುಗಳು ಬರುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಸಾಕ್ಷಿಗಳಿದ್ದರೂ ಕೂಡ ತದ್ವಿರುದ್ಧವಾಗಿ ತೀರ್ಪು ಬರುತ್ತಿವೆ. ಈ ರೀತಿ ತೀರ್ಪು ಬಂದಿರೋದು ಇದೇ ಮೊದಲಲ್ಲ. ವಿಶೇಷವಾಗಿ ಇಂತಹ ಪ್ರಕರಣಗಳಲ್ಲಿ ವಿರುದ್ಧವಾದ ತೀರ್ಪು ಬರುತ್ತಿವೆ ಎಂದು ವಾಗ್ದಾಳಿ ನಡೆಸಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಾಢ್ಯರೊಂದಿಗೆ ಜೊತೆಯಾಗುವುದು ಜನದ್ರೋಹ
2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳಿಗೂ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆಯೇ ಸರಿಯಾಗಿ ನಡೆದಿಲ್ಲ ಎಂದು ಎನ್‌ಐಎ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ 7 ಜನ ಆರೋಪಿಗಳ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ