ಒಳಮೀಸಲಾತಿ ಜಾರಿಗೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಮಾದಿಗ ದಂಡೋರ ಸಂಘಟನೆಯಿಂದ ಆಗಸ್ಟ್ 18 ರಂದು ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಹೋರಾಟದ ಕರಪತ್ರವನ್ನು ಗುರಮಿಠಕಲ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವ ಸಿದ್ಧತಾ ಸಭೆ ಬಳಿಕ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಮಾದಿಗ ದಂಡೋರ ರಾಜ್ಯ ಕಾರ್ಯದರ್ಶಿ ಹಾಗೂ ಯಾದಗಿರಿ ಜಿಲ್ಲಾಧ್ಯಕ್ಷ ಕಾಶಪ್ಪ ಹೆಗ್ಗಣಗೇರಾ ಮಾತನಾಡಿ, “ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಲು ವಿಳಂಬ ನೀತಿ ಅನುಸರಿಸುತ್ತಿದೆ. ಇದನ್ನು ಖಂಡಿಸಿ ಆಗಸ್ಟ್ 18 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಎಮ್‌ಆರ್‌ಪಿಎಸ್ಆ ರಾಜ್ಯಾಧ್ಯಕ್ಷ ಬಿ. ನರಸಪ್ಪ ದಂಡೋರ ಅವರ ನೇತ್ರತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಮುಖ್ಯ ಅತಿಥಿಗಳಾಗಿ ತೆಲಂಗಾಣದ ಮಂದಕೃಷ್ಣ ಮಾದಿಗ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲಿದ್ದಾರೆ. ಜಿಲ್ಲೆಯ ಹೋರಾಟಗಾರರು, ಬುದ್ಧಿಜೀವಿಗಳು, ಯುವಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಜಿಲ್ಲಾ ಉಪಾಧ್ಯಕ್ಷ ಆಶನ್ನಾ ಬುದ್ಧ, ಮಲ್ಲು ಬೆಳಗೇರ, ಗುರುಮಠಕಲ್ ರವಿ ಬುರನೊಳ, ಗೌರವಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಶರಣು ಅಮ್ಮಪಲ್ಲಿ, ಕಾರ್ಯದರ್ಶಿ ನಾಗೇಶ್, ಶಾಂತಪ್ಪ ಸೈದಾಪುರ್, ರಮೇಶ್ ಜ್ಞಾನವೃಕ್ಷ, ಅನಂತಪ್ಪ ಮುಕುಡಿ, ಭೀಮು ಗೂಡ್ಸೆ. ಭೀಮಶೆಂಕರ್ ಎಂ.ಟಿ., ವೆಂಕಟೇಪ್ಪ, ಪರಮಪ್ಪ ಕಾಕಲವಾರ, ರವಿ ಮಿನಿಗೇರಿ, ಭೀಮ್ ಗಿರಿ, ಉಮೇಶ ಮತ್ತಿತರರು ಭಾಗವಹಿಸಿದ್ದರು.