- ‘ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಒತ್ತುಕೊಟ್ಟಿದ್ದರು’
- ‘ನಿಜಲಿಂಗಪ್ಪ ಅತ್ಯಂತ ಪ್ರಾಮಾಣಿಕ ರಾಜಕಾರಣಿಯಾಗಿದ್ದರು’
ಎಸ್.ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ದಿ.ಎಸ್. ನಿಜಲಿಂಗಪ್ಪ ನವರ ಪುಣ್ಯತಿಥಿ ಅಂಗವಾಗಿ ಮಂಗಳವಾರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
“ರಾಜ್ಯದ ಮುಖ್ಯಮಂತ್ರಿಯಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ನೀರಾವರಿಗೆ ಹೆಚ್ಚು ಆದ್ಯತೆ ನೀಡಿ, ಏಕೀಕರಣದ ನಂತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಮಾಡುವ ಇಚ್ಛಾಶಕ್ತಿಯಿಂದ ಅನೇಕ ಯೋಜನೆಗಳನ್ನು ರೂಪಿಸಿದರು” ಎಂದು ಸ್ಮರಿಸಿದರು.
“ಅತ್ಯಂತ ಪ್ರಾಮಾಣಿಕ ರಾಜಕಾರಣಿಯಾಗಿದ್ದ ಅವರು ತಮ್ಮ ಜೀವನದುದ್ದಕ್ಕೂ ಅದನ್ನು ಕಾಪಾಡಿಕೊಂಡು ಬಂದವರು. ಧೀಮಂತ ನಾಯಕರಾಗಿದ್ದ ಅವರ ಪುಣ್ಯತಿಥಿ ಆಚರಿಸಿ ಗೌರವ ಸಲ್ಲಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಅವರ ಬದುಕು ನಮಗೆ ಮಾರ್ಗದರ್ಶನ ನೀಡಲಿ. ನಿಜಲಿಂಗಪ್ಪನವರು ಈ ನಾಡಿಗೆ ಹಾಗೂ ದೇಶಕ್ಕೆ ಮಾಡಿದ ಸೇವೆಯನ್ನು ನಾವೆಲ್ಲರೂ ಸ್ಮರಿಸಬೇಕು” ಎಂದರು.