ದಾವಣಗೆರೆ | ಮಾಜಿ ಸೈನಿಕರ ಚಟುವಟಿಕೆಗಳಿಗೆ ಸಭೆಗಳಿಗೆ ಸೈನಿಕರ ಭವನ, ಜಮೀನು ಮಂಜೂರಿಗೆ ಒತ್ತಾಯಿಸಿ ಮನವಿ

Date:

Advertisements

ಮಾಜಿ ಸೈನಿಕರ ಕಾರ್ಯ ಚಟುವಟಿಕೆಗಳಿಗಾಗಿ, ಅವರ ಕುಟುಂಬದ ಸಭೆ ಸಮಾರಂಭಗಳಿಗಾಗಿ ಅವಳಿ ತಾಲ್ಲೂಕಿನಲ್ಲಿ ಸೈನಿಕರ ಭವನ ನಿರ್ಮಾಣ ಮಾಡಬೇಕು, ಎಂಬ ಉದ್ದೇಶದಿಂದ 2 ಎಕರೆ ಜಮೀನು ಕೊಡಬೇಕು ಎಂದು ಆಗ್ರಹಿಸಿ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘ(ರಿ) ದಿಂದ ಇಂದು ತಹಶೀಲ್ದಾರ್ ಮತ್ತು ಪುರಸಭೆಯ ಅಧ್ಯಕ್ಷರು, ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

1002419705

ಈ ವೇಳೆ ಮಾತನಾಡಿದ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಮುಖಂಡರು, “ಹಲವು ವರ್ಷಗಳಿಂದ ಸೈನಿಕರ ಭವನ ನಿರ್ಮಾಣಕ್ಕೆ ವಿನಂತಿಸಿ ಸಂಬಂಧಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳಿಗೂ ಮತ್ತು ಜನಪ್ರತಿನಿಧಿ ಗಳಿಗೂ ಮನವಿಯನ್ನು ಕೊಡುತ್ತಾ ಬಂದಿದ್ದೇವೆ. ಆದರೂ ಇದರ ಬಗ್ಗೆ ಕ್ರಮ ಕೈಗೊಂಡಿಲ್ಲ. ಹಾಗಾಗಿ ಮತ್ತೊಮ್ಮೆ ಕೊಟ್ಟ ಮನವಿಯ ಬಗ್ಗೆ ಎಲ್ಲರ ಗಮನಕ್ಕೆ ತಂದು ಮಂಜೂರು ಮಾಡಲು ಒತ್ತಾಯಿಸಿದ್ದೇವೆ. ಸೈನಿಕರ ಭವನ ಮತ್ತು ಸೈನಿಕರ ನಗರದ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ” ಎಂದು ತಿಳಿಸಿದರು.

1002419706

“ಮನವಿಗೆ ಎಲ್ಲಾ ಅಧಿಕಾರಿಗಳೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.‌ ಕೂಡಲೇ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದು ಮುಂದಿನ ಹಂತಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಾತಿ ಗಣತಿ ಸಮೀಕ್ಷೆ ಮಂಡಿಸಿ, ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೊಳಿಸಿ; ದಲಿತ ಸಂಘರ್ಷ ಸಮಿತಿ

ಈ ಸಂದರ್ಭದಲ್ಲಿ ತಾಲ್ಲೂಕಿನ ತಹಶೀಲ್ದಾರ್ ಹಾಗೂ ದಂಡಾಧಿಕಾರಿಗಳಾದ ಸಿ ರಾಜೇಶ್ ಕುಮಾರ್, ಪುರಸಭೆಯ ಅಧ್ಯಕ್ಷರಾದ ಮೈಲಪ್ಪ, ಮುಖ್ಯಾಧಿಕಾರಿಗಳಾದ ಲೀಲಾವತಿ, ಪುರಸಭೆ ಸದಸ್ಯ ರಾಜೇಂದ್ರ, ಮಂಜು ಇಂಚರ, ವಿಜೇಂದ್ರಪ್ಪ, ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಸಂಘದ ಸಂಸ್ಥಾಪಕ ಅಧ್ಯಕ್ಷರು ಹಾಗೂ ಹಾಲಿ ಗೌರವಾಧ್ಯಕ್ಷರಾದ ವಾಸಪ್ಪ ಎಂ, ಉಪಾಧ್ಯಕ್ಷರಾದ ರಾಮಪ್ಪನವರು, ಕಾರ್ಯದರ್ಶಿಗಳಾದ ಗಂಗಾಧರ್, ಖಜಾಂಚಿ ತೋಟಪ್ಪ, ನಿರ್ದೇಶಕ ಜಯಪ್ಪ, ರವಿಕುಮಾರ್ ಸೂರಗೊಂಡನಕೊಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಆಗಸ್ಟ್ 23ರಿಂದ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು...

ಬೀದರ್‌ | ಈ ತಾಂಡಾಕ್ಕೆ ದಾರಿ ಯಾವುದಯ್ಯಾ?

ʼನಾವು ಹುಟ್ಟಿನಿಂದ ಅಲ್ಲ, ಈ ತಾಂಡಾ ಹುಟ್ಟಿನಿಂದಲೂ ರಸ್ತೆಯೇ ಕಂಡಿಲ್ಲ. ಸ್ವಲ್ಪ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

Download Eedina App Android / iOS

X