ಮದ್ಯ ಸೇವನೆಗೆ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮಗನೇ ತಾಯಿಯನ್ನು ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.
ತಾಯಿಯನ್ನು ಹತ್ಯೆ ಮಾಡಿದ ಆರೋಪಿ ಪವನ್ (28), ತಾಯಿ ಭವಾನಿ (52) ಅವರನ್ನು ಬೆಂಕಿ ಹಾಕಿ ಅರೆಬರೆ ಸುಟ್ಟು ಮನೆಯಲ್ಲೇ ಮಲಗಿದ್ದಾನೆ ಎಂದು ತಿಳಿದು ಬಂದಿದೆ. ಮೃತ ಭವಾನಿ ಅವರು ಬೆಟ್ಟದ ಮೇಲೆ ಇದ್ದು, ಜನವಸತಿ ಪ್ರದೇಶದಿಂದ ಹೊರಗೆ ವಾಸವಾಗಿದ್ದರು ಎನ್ನಲಾಗಿದೆ.
ಒಂಟಿ ಮನೆಯಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ತಂದೆ ತಾಯಿ ಮಗ ಮೂವರು ವಾಸವಾಗಿದ್ದರು . ತಂದೆ ಮಗ ಇಬ್ಬರೂ ಮದ್ಯವ್ಯಸನಿಗಳು ಆಗಿದ್ದರು ಎನ್ನಲಾಗಿದೆ. ಈ ಪ್ರಕರಣದ ಬಗ್ಗೆ ತಂದೆಯೇ ಆಲ್ದೂರು ಠಾಣೆಗೆ ದೂರು ನೀಡಿದ್ದಾರೆ. ಬುಧವಾರ ತಡರಾತ್ರಿಯಲ್ಲಿ ಪೊಲೀಸರು ಮತ್ತು ಸ್ಥಳೀಯರು ಮೃತದೇಹವನ್ನು ಕಿಲೋಮೀಟರ್ ಗಟ್ಟಲೇ ಹೊತ್ತು ತಂದಿದ್ದು, ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ಹತ್ತು ವರ್ಷ ಜೈಲು
ಈ ಕುರಿತು ಆಲ್ದೂರು ಠಾಣಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲಾಗಿದೆ.