ಯರಗೇರಾ ತಾಲ್ಲೂಕು ಕೇಂದ್ರಕ್ಕಾಗಿ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆದ ಹೋರಾಟದ ವೇಳೆ ಮುಖ್ಯಮಂತ್ರಿ ಅವರನ್ನು ಭೇಟಿಯಾದಾಗ ತಾಲ್ಲೂಕು ಕೇಂದ್ರವನ್ನಾಗಿಸಲು ಅಗತ್ಯವಿರುವ ದಾಖಲೆಗಳನ್ನು ಪರಿಶೀಲಿಸಿ, ಮುಂದೆ ಕ್ರಮವಹಿಸಲಾಗುವುದು ಭರವಸೆಯನ್ನು ನೀಡಿದ್ದಾರೆ ಎಂದು ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಮಹ್ಮದ್ ನಿಜಾಮುದ್ದೀನ ಹೇಳಿದರು.
ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯರಗೇರಾ ಹೋಬಳಿಯನ್ನು ತಾಲ್ಲೂಕು ಕೇಂದ್ರವನ್ನಾಗಿಸಲು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ಮಾಡಲಾಗಿದ್ದು, ಜೊತೆಗೆ ಸಿಎಂ ಕಂದಾಯ ಸಚಿವರು, ಸೇರಿದಂತೆ ಇತರೆ ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಲಾಗಿದೆ. ಇದೀಗ ಯರಗೇರಾ ತಾಲ್ಲೂಕು ಕೇಂದ್ರವನ್ನಾಗಿಸಲು ದಾಖಲೆ ಸಿಕ್ಕಿದ್ದು, ಸರ್ಕಾರ ಯರಗೇರಾವನ್ನು ತಾಲೂಕು ಕೇಂದ್ರವನ್ನಾಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ತಾಲ್ಲೂಕು ಕೇಂದ್ರವಾಗಿದ್ದ ಯರಗೇರಾ ಹೋಬಳಿಯನ್ನು ಪುನಃ ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಗ್ರಾಮಸ್ಥರು ಸರ್ಕಾರವನ್ನು ಒತ್ತಾಯಿಸಿದ್ದಾರೆ ಹೈದ್ರಾಬಾದ್‌ನಲ್ಲಿ ದೊರಕಿರುವ ಯರಗೇರಾ ತಾಲ್ಲೂಕು ಕೇಂದ್ರವಾಗಿದ್ದ ಮಹತ್ವದ ದಾಖಲೆಗಳನ್ನು ಒಳಗೊಂಡಿದೆ. ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಯರಗೇರಾ ತಾಲ್ಲೂಕು ಮರುಸ್ಥಾಪನೆ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ಸರಕಾರದ ಗಮನ ಸೆಳೆಯಲು ತಮ್ಮ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.
ಒಂದು ವೇಳೆ ಯರಗೇರಾ ತಾಲ್ಲೂಕು ಕೇಂದ್ರವನ್ನಾಗಿಸದೇ ಸರ್ಕಾರ ನಿರ್ಲಕ್ಷ ವಹಿಸಿದರೇ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟವನ್ನು ರೂಪಿಸಲಾಗುವುದು, ರಸ್ತೆ ತಡೆ ಚಳುವಳಿಯನ್ನು ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಆಟೋ ಪಲ್ಟಿ ಹಲವರಿಗೆ ಗಾಯ
ಈ ಸಂದರ್ಭದಲ್ಲಿ ಬಸವರಾಜ ಹೂಗಾರ, ಮಹೆಬೂಬ್ ಪಟೇಲ್, ಕೆ.ಲಕ್ಷ್ಮೀಪತಿ, ಮಹ್ಮದ್ ರಫಿ ಸೇರಿದಂತೆ ಅನೇಕರಿದ್ದರು.
