ಅತ್ಯಾಚಾರ ಆರೋಪ ಎದುರಿಸುತ್ತಿರುವ ಬೀದರ್ ಜಿಲ್ಲೆಯ ಔರಾದ್ ಬಿಜೆಪಿ ಶಾಸಕ ಪ್ರಭು ಚವ್ಹಾಣ ಪುತ್ರ ಪ್ರತೀಕ್ ಚವ್ಹಾಣ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ ಎಂದು ಸಂತ್ರಸ್ತೆ ಪರ ವಕೀಲ ಕೇಶವ್ ಶ್ರೀಮಾಳೆ ತಿಳಿಸಿದ್ದಾರೆ.
ಅತ್ಯಾಚಾರ ಆರೋಪ ಹೊತ್ತಿರುವ ಶಾಸಕ ಪ್ರಭು ಚವ್ಹಾಣ ಪುತ್ರ ಪ್ರತೀಕ್ ಚವ್ಹಾಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದೆ.
ಶಾಸಕ ಚವ್ಹಾಣ ಪುತ್ರನ ಪರ ವಕೀಲ ಎಂ.ಎಂ.ಗೋಡಬಲೆಯವರು ನಿರೀಕ್ಷಣಾ ಜಾಮೀನಿಗಾಗಿ ಮಂಗಳವಾರ (ಜು.29) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ್ದ ಕೋರ್ಟ್ ಗುರುವಾರಕ್ಕೆ (ಜು.31) ತೀರ್ಪನ್ನು ಕಾಯ್ದಿರಿಸಿತ್ತು. ಬಳಿಕ ಜಾಮೀನು ನೀಡದಂತೆ ಕೋರ್ಟ್‌ಗೆ ಸಂತ್ರಸ್ತೆ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ
ಬಿಜೆಪಿ ಶಾಸಕರ ಪುತ್ರನ ವಿರುದ್ಧ ಮಹಾರಾಷ್ಟ್ರ ಮೂಲದ ಯುವತಿಯೊಬ್ಬಳು ಬೀದರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು.