ಬೆಳಗಾವಿ ಜಿಲ್ಲೆಯ ನಕಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪಿಕೆಪಿಎಸ್) ಸೃಷ್ಟಿಸಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಬೇನಾಮಿ ಹಣವನ್ನು ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ದುರುಪಯೋಗ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಮಹಾಂತೇಶ್ ಕಡಾಡಿ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಕಲಿ ಪಿಕೆಪಿಎಸ್ಗಳನ್ನು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಹ ಬಳಸಲಾಗುತ್ತಿದೆ. ಜನರಿಗೆ ಈ ಸೊಸೈಟಿಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಪತ್ರ ಬರೆದರೂ ಇಂದಿಗೂ ಉತ್ತರ ಬಂದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅವರು ಮುಂದುವರಿದು, “ಈ ಪ್ರಕರಣದ ಕುರಿತು ಇಡಿ ತನಿಖೆ ನಡೆಯುತ್ತಿದ್ದರೂ ಇನ್ನೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಆರೋಪಿಸಿದರು.