ಶ್ರೀನಗರ | ಬೆಟಾಲಿಯನ್ ಪ್ರಧಾನ ಕಚೇರಿಯಿಂದ ಬಿಎಸ್‌ಎಫ್ ಯೋಧ ನಾಪತ್ತೆ

Date:

Advertisements

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧರೊಬ್ಬರು ಜುಲೈ 31ರ ಗುರುವಾರ ತಡರಾತ್ರಿ ಬೆಟಾಲಿಯನ್ ಪ್ರಧಾನ ಕಚೇರಿಯಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. 60ನೇ ಬೆಟಾಲಿಯನ್‌ನ ಸದಸ್ಯ ಸುಗಮ್ ಚೌಧರಿ ಅವರನ್ನು ಪತ್ತೆಹಚ್ಚಲು ಸದ್ಯ ಶೋಧ ಕಾರ್ಯಾಚರಣೆ ಆರಂಭವಾಗಿದೆ.

ಸದ್ಯ ನಾಪತ್ತೆ ಪ್ರಕರಣ ದಾಖಲಿಸಲಾಗಿದ್ದು, ಅಧಿಕ ತನಿಖೆ ನಡೆಯುತ್ತಿದೆ. ಜಮ್ಮು ಕಾಶ್ಮೀರದ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸುತ್ತಿದೆ. ಈ ನಡುವೆ ಬಿಎಸ್‌ಎಫ್ ಯೋಧರೊಬ್ಬರು ನಾಪತ್ತೆಯಾಗಿರುವುದು ಹೆಚ್ಚು ಮಹತ್ವವನ್ನು ಪಡೆದಿದೆ.

ಇದನ್ನು ಓದಿದ್ದೀರಾ? ಬಂಧಿತ ಬಿಎಸ್‌ಎಫ್ ಯೋಧನನ್ನು ಭಾರತಕ್ಕೆ ಹಸ್ತಾಂತರಿಸಿದ ಪಾಕಿಸ್ತಾನ

Advertisements

ಕಳೆದ 100 ದಿನಗಳಲ್ಲಿ, ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿದಂತೆ 12 ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಹತರಾದವರಲ್ಲಿ ಆರು ಮಂದಿ ಪಾಕಿಸ್ತಾನಿ ಭಯೋತ್ಪಾದಕರು ಉಳಿದ ಆರು ಮಂದಿ ಇತ್ತೀಚಿನ ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದ ಸ್ಥಳೀಯ ಉಗ್ರರು ಎಂದು ಈಗಾಗಲೇ ಭದ್ರತಾ ಪಡೆಗಳು ತಿಳಿಸಿವೆ.

ಆಪರೇಷನ್ ಮಹಾದೇವ್ ಎಂಬ ಹೆಸರಲ್ಲಿ ಶ್ರೀನಗರದ ಡಚಿಗಮ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಜುಲೈ 28ರಂದು ಪಹಲ್ಗಾಮ್ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಮತ್ತು ಇತರ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಇದಾ ಒಂದು ದಿನದ ನಂತರ ಪೂಂಚ್ ವಲಯದಲ್ಲಿ ಆಪರೇಷನ್ ಶಿವಶಕ್ತಿಯನ್ನು ಪ್ರಾರಂಭಿಸಲಾಗಿದೆ. ಇದರಲ್ಲಿ ಇನ್ನಿಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ತಿಂಗಳುಗಟ್ಟಲೆ ನಡೆದ ಕಾರ್ಯಾಚರಣೆಯಲ್ಲಿ ಹಲವು ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದೂ ವರದಿಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X