ವರನಟ ಡಾ. ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ತಮಿಳುನಾಡಿನ ಗಾಜನೂರಿನ ಮನೆಯಲ್ಲೇ ನಾಗಮ್ಮ ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನು ಓದಿದ್ದೀರಾ? ಅಪ್ಪು ನೆನಪು | ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಂಡ ರಾಘವೇಂದ್ರ ರಾಜ್‌ಕುಮಾರ್
ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವ ಬಗ್ಗೆಯೂ ಸುದ್ದಿಯಾಗಿತ್ತು. ಹಾಗೆಯೇ ಅನಾರೋಗ್ಯದಿಂದ ಬಳಲುತ್ತಿದ್ದ ನಾಗಮ್ಮ ಅವರಿಗೆ ನಟ ಪುನೀತ್ ರಾಜ್‌ಕುಮಾರ್ ನಿಧನದ ಬಗ್ಗೆ ಈವರೆಗೂ ಮಾಹಿತಿಯೇ ಇರಲಿಲ್ಲ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದೆ.
