ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.
ಬಿಜೆಪಿ ವರಿಷ್ಠರ ಭೇಟಿಗಾಗಿ ಬೊಮ್ಮಾಯಿ ಅವರು ಸೋಮವಾರವೇ ದೆಹಲಿಗೆ ತೆರಳಿದ್ದರು. ಆದರೆ, ನಾಯಕರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಮಂಗಳವಾರ ಭೇಟಿ ಮಾಡಿ ರಾಜ್ಯದ ಪ್ರಸಕ್ತ ರಾಜಕೀಯ ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ.
ವಿರೋಧ ಪಕ್ಷದ ನಾಯಕರ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೊಮ್ಮಾಯಿ ಅವರನ್ನು ಮಾತುಕತೆಗೆ ಆಹ್ವಾನಿಸಿದ್ದರು ಎನ್ನಲಾಗಿದೆ.
ವಿಧಾನಸಭೆ, ವಿಧಾನ ಪರಿಷತ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಳಂಬವಾಗುತ್ತಿರುವುದರ ನಡುವೆ ಬಸವರಾಜ ಬೊಮ್ಮಾಯಿ ಅವರ ವರಿಷ್ಠರ ಭೇಟಿ ಸಹಜವಾಗಿಯೇ ಕುತೂಹಲ ಮೂಡಿಸಿದೆ.