ಧರ್ಮಸ್ಥಳ ನೇತ್ರಾವತಿ ನದಿ ಪರಿಸರದಲ್ಲಿ ಹಲವರ ದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್‌ಐಟಿ, ಈಗ ಪಾಯಿಂಟ್ ನಂಬರ್ ಎಂಟರಲ್ಲಿ ಶೋಧ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಆಗಸ್ಟ್ 1ರಂದು ಬೆಳಿಗ್ಗೆ 11:30ರ ಸುಮಾರಿಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ದೂರುದಾರನೊಂದಿಗೆ ಬಂದ ಎಸ್‌ಐಟಿ ಅಧಿಕಾರಿಗಳು, 7ನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಯಾವುದೇ ಮೂಳೆ ಅಥವಾ ಇತರೆ ವಸ್ತುಗಳು ಲಭಿಸಿಲ್ಲ.
ಇದನ್ನು ಓದಿದ್ದೀರಾ? BREAKING NEWS | ಧರ್ಮಸ್ಥಳ ಪ್ರಕರಣ: ಪಾಯಿಂಟ್ ನಂ 6ರಲ್ಲಿ ಮೂಳೆ ಪತ್ತೆ
ನಿನ್ನೆ ಆರನೇ ಸ್ಥಳದಲ್ಲಿ ಶೋಧ ನಡೆಸಿದಾಗ ಮಾನವ ದೇಹದ ಕೆಲ ಮೂಳೆಗಳು ಸಿಕ್ಕಿದೆ. ಅಗೆತದ ವೇಳೆ ಸಿಕ್ಕಿರುವ ಮೂಳೆಗಳು ಸೊಂಟದ ಕೆಳಭಾಗದವು ಎಂದು ಎಸ್‌ಐಟಿ ಅಧಿಕಾರಿಗಳು ಖಚಿತಪಡಿಸಿದ್ದರು.
