ಚಿಂತಾಮಣಿ ತಾಲೂಕಿನ ಕೈವಾರ ಹೋಬಳಿಯ ತಳಗವಾರ ಗ್ರಾಮದಲ್ಲಿ ಮನೆ ಮನೆಗೆ ಪೊಲೀಸ್ ಹಾಗೂ ಪೊಲೀಸ್ ಮಾದರಿ ಗ್ರಾಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗ್ರಾಮದ ಜನಸಾಮಾನ್ಯರ ಮನೆಗಳಿಗೆ ಭೇಟಿ ನೀಡಿ ಎರಡೂ ಕಾರ್ಯಕ್ರಮಗಳ ಉದ್ದೇಶದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಮನೆ ಮನೆಗೆ ಪೊಲೀಸ್ ಇದು ನೂತನ ಬೀಟ್ ವ್ಯವಸ್ಥೆಯಾಗಿದೆ ಹಾಗೂ ಮಾದರಿ ಪೊಲೀಸ್ ಗ್ರಾಮ ಕಾರ್ಯಕ್ರಮದ ಉದ್ದೇಶ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಪ್ರತಿನಿತ್ಯ ಗ್ರಾಮದ ಮನೆಗಳಿಗೆ ಹಾಗೂ ಶಾಲೆಗೆ ಭೇಟಿ ನೀಡಿ ಸಾರ್ವಜನಿಕರ ಹಾಗೂ ಶಾಲಾ ಮಕ್ಕಳ ಸಮಸ್ಯೆಗಳನ್ನು ಮತ್ತು ಅಹವಾಲುಗಳನ್ನು ಆಲಿಸುವುದು ಮತ್ತು ಕಾನೂನು ಅರಿವು ಮೂಡಿಸುವುದಾಗಿರುತ್ತದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ರಕ್ಷಣಾಧಿಕಾರಿ ಕುಶಾಲ್ ಚೌಕ್ಸೆ ಹೇಳಿದರು.

ಈ ಸಂದರ್ಭದಲ್ಲಿ ಅಡಿಷನಲ್ ಎಸ್ ಪಿ ಜಗನ್ನಾಥ್ ರೈ,ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್,ಸೇರಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರುಗಳು ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.
ಇದನ್ನೂ ಓದಿ: ಚಿಂತಾಮಣಿ | ಬ್ಯಾಂಕ್‌ಗಳಲ್ಲಿ ಗೃಹಲಕ್ಷ್ಮಿ ಹಣಕ್ಕೆ ಕತ್ತರಿ; ರೈತ ಸಂಘದಿಂದ ಘೇರಾವು ಎಚ್ಚರಿಕೆ
