ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಾಮಗಾರಿಗಳಿಗೆ ಕಳೆದ 28 ತಿಂಗಳಿನಿಂದ ಬಾಕಿ ಬಿಲ್ ಪಾವತಿ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ, ಗುತ್ತಿಗೆದಾರರು ರಾಜ್ಯ ಸರ್ಕಾರದ ಕ್ರಮದ ವಿರುದ್ಧ ರಾಜ್ಯಪಾಲರಿಗೆ ಮೊರೆ ಹೋಗಿದ್ದಾರೆ.
ಅಲ್ಲದೇ ಉಪಮುಖ್ಯಮಂತ್ರಿ ಡಿ ಕೆ.ಶಿವಕುಮಾರ್ ಅವರು ಕಮಿಷನ್ ಕೇಳಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಆಗಸ್ಟ್ 8ರಂದು ಬಿಬಿಎಂಪಿ ಗುತ್ತಿಗೆದಾರ ಸಂಘದ ಸದಸ್ಯರು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸರ್ಕಾರ ಬಾಕಿ ಬಿಲ್ ಪಾವತಿ ಮಾಡದೇ ತಡೆ ಹಿಡಿದಿದೆ ಎಂದು ದೂರು ನೀಡಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ; ಇಬ್ಬರ ಬಂಧನ
ಈ ಬಗ್ಗೆ ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿ, “28 ತಿಂಗಳ ಹಿಂದೆಯೇ ಕಾಮಗಾರಿ ಪೂರ್ಣಗೊಳಿಸಿದ್ದು, ಚುನಾವಣೆ, ಹೊಸ ಸರ್ಕಾರ ರಚನೆ ಕಾರಣಕ್ಕಾಗಿ ಬಾಕಿ ಬಿಲ್ ಬಿಡುಗಡೆ ಆಗಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಕಳೆದ 8 ತಿಂಗಳಿನಿಂದ ಬಾಕಿ ಬಿಲ್ ಪಾವತಿ ಮಾಡಿಲ್ಲ. ಹೀಗೆ ಮುಂದುವರೆದರೆ ಗುತ್ತಿಗೆದಾರರು ಸಾಲದ ಸುಳಿಗೆ ಸಿಲುಕಿಕೊಳ್ಳಬೇಕಾಗುತ್ತದೆ” ಎಂದರು.