ಕಲಬುರಗಿ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶ್ರೀಮತಿ ಇಂದಿರಾಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯದ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ಅರ್ಚನಾ ಹಲ್ಲೆ ಮಾಡಿರುವುದನ್ನು ಖಂಡಿಸಿ ವಸತಿನಿಲಯದ ವಿದ್ಯಾರ್ಥಿನಿಯರು ಅಹೋರಾತ್ರಿ ಪ್ರತಿಭಟನೆ ನಡೆಸಿದರು.
ಈದಿನ.ಕಾಮ್ ನೊಂದಿಗೆ ಎಸ್ ಎಫ್ ಐ ಸಂಘನೆಯ ಜಿಲ್ಲಾಧ್ಯಕ್ಷ ಮಾತನಾಡಿ, “ಕಳಪೆ ಮಟ್ಟದ ಅಡುಗೆ ಸೇರಿದಂತೆ ಹಲವು ಸಮಸ್ಯೆಗಳನ್ನು ಎತ್ತಿಹಿಡಿದು ವಾರ್ಡನ್ ಅವರನ್ನು ವಿದ್ಯಾರ್ಥಿನಿ ಪ್ರಶ್ನೆ ಮಾಡಿದ್ದಳು. ಇದಕ್ಕೆ ಕುಪಿತಗೊಂಡ ವಾರ್ಡನ್ ಅರ್ಚನಾ ವಿದ್ಯಾರ್ಥಿಗೆ ಕಾಪಳಕ್ಕೆ ಹೊಡೆದು ಹಲ್ಲೆ ಮಾಡಿದ್ದಾರೆಂದು” ತಿಳಿಸಿದರು.
“ವಸತಿ ನಿಲಯ ವಾರ್ಡನ್ ಅವರ ಈ ವರ್ತನೆಯನ್ನು ಖಂಡಿಸಿ ಹಾಗೂ ಹಾಸ್ಟೆಲ್ ನಲ್ಲಿ ಮೂಲಸೌಕರ್ಯಗಳನ್ನು ಒದಗಿಸುವಂತೆ ವಿದ್ಯಾರ್ಥಿನಿಯರು ಗುರುವಾರ ರಾತ್ರಿ ಧರಣಿ ನಡೆಸಿದ್ದು, ರಾತ್ರಿ 12ಗಂಟೆಯ ವರೆಗೂ ಧರಣಿ ಮುಂದುವರೆಸಿದ್ದಾರೆ. ಕೂಡಲೇ ಸಂಬಂಧಪಟ್ಟವರು ಘಟನೆ ಸಂಬಂಧ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.
ಇದನ್ನೂ ಓದಿ: ಕಲಬುರಗಿ | ರಸ್ತೆ ಗುಂಡಿ ಮುಚ್ಚಲು ಜಯ ಕರ್ನಾಟಕ ಸಂಘಟನೆ ಆಗ್ರಹ