ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿ ಜಯಶ್ರೀ ನಾಯಕ್ ಸಾವಿನ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ ಆಗ್ರಹಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ʼಯುವತಿಯ ಸಾವಿನ ಹಿಂದಿರುವ ಕಾಣದ ಕೈಗಳು ಯಾವವು? ಆತ್ಮಹತ್ಯೆ ಆಗಿದ್ದರೆ ಅದರ ಹಿಂದಿನ ಕಾರಣಗಳೇನು ಎಂಬುದನ್ನು ಪತ್ತೆ ಮಾಡಬೇಕುʼ ಎಂದು ಒತ್ತಾಯಿಸಿದರು.
ʼವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲೇ ಈ ಸಾವು ನಡೆದಿದೆ. ಆ ಸಾವಿಗೆ ವಿಶ್ವವಿದ್ಯಾಲಯದ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಕುಲಪತಿ, ಕುಲಸಚಿವರು, ವಿದ್ಯಾರ್ಥಿ ಕಲ್ಯಾಣ ಅಧಿಕಾರಿಗಳೆಲ್ಲ ಹೊಣೆಗಾರರಾಗುತ್ತಾರೆ. ರಾಜ್ಯ ಸರ್ಕಾರ ಕೂಡಲೇ ಇವರನ್ನು ವಿಚಾರಣೆಗೆ ಒಳಪಡಿಸಬೇಕು. ಕೇಂದ್ರೀಯ ವಿಶ್ವವಿದ್ಯಾಲಯವು ಇತ್ತೀಚೆಗೆ ನಕಾರಾತ್ಮಕ ಸಂಗತಿಗಳಿಂದ ಸುದ್ದಿಯಲ್ಲಿದೆ. ಪ್ರೊ.ಬಟ್ಟು ಸತ್ಯನಾರಾಯಣ ಅವರು ಕುಲಪತಿಯಾದಾಗಿನಿಂದ ವಿ.ವಿ ಆವರಣದಲ್ಲಿ ಕೋಮುವಾದ, ಜಾತಿವಾದ ತಲೆ ಎತ್ತಿದೆʼ ಎಂದು ಟೀಕಿಸಿದರು
ರಾಜ್ಯ ಸರ್ಕಾರ ಕೇಂದ್ರೀಯ ವಿಶ್ವವಿದ್ಯಾಲಯದ ಜಯಶ್ರೀ ಎಂಬ ದಲಿತ ವಿದ್ಯಾರ್ಥಿನಿಯ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಿಷಪಕ್ಷಪಾತವಾಗಿ ತನಿಖೆ ಮಾಡಿಬೇಕುʼ ಒತ್ತಾಯಿಸಿದರು.
ಈ ವೇಳೆ ಪ್ರಮುಖರದ ಸುರೇಶ್ ಹಾದಿಮನಿ, ಶಂಕರ್, ಸಿದ್ದಪ್ಪ ಸುಳ್ಳದ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಈ ದಿನ ಸಂಪಾದಕೀಯ | ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ಹತ್ಯೆಗಳಲ್ಲವೇ?