ಹಾವೇರಿ | ಒಳ ಮೀಸಲಾತಿ ಜಾರಿ ಮಾಡುವಂತೆ ಪ್ರತಿಭಟನೆ, ಆ 15ರ ವರೆಗೆ ಗಡುವು

Date:

Advertisements

ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

 ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದ ಎದುರು ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ, ಸುಪ್ರೀಂಕೋರ್ಟ್ ತೀರ್ಪುಗೆ ಗೌರವ ಕೊಡಿ, ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಜಾರಿಮಾಡಿ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮುಖಂಡರು ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, “ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಸಮುದಾಯದೊಳಗಿನ ಅತೀ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ಒಳ ಮೀಸಲಾತಿಯ ಬೇಡಿಕೆ ಈಡೇರಿಕೆಗೆ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಶೀಘ್ರವಾಗಿ ಒಳಮೀಸಲಾತಿ ಮಾಡಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದರು.

Advertisements

ಮುಖಂಡರು ಡಿ ಎಸ್ ಮಾಳಗಿ ಮಾತನಾಡಿ, “ಈ ಅಸಮಾನತೆಯನ್ನು ಸರಿಪಡಿಸಲು, ಸರ್ವೋಚ್ಛ ನ್ಯಾಯಾಲಯದ ತೀರ್ಪು ಇಂದಿಗೆ ಒಂದು ವರ್ಷ ಆಗಿದೆ. ಸ್ಪಷ್ಟವಾಗಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಆದೇಶವನ್ನು ನೀಡಿದೆ. ರಾಜ್ಯ ಸರ್ಕಾರದ ವಿಳಂಬ ನೀತಿಯಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಹಾಗೂ ಮಹಿಳೆಯರು ಹಾಗೂ ಒಟ್ಟಾರೆ ಸಮಾಜ ತಮ್ಮ ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ನಮಗೆ ಆಗಿರುವ ಅನ್ಯಾಯವನ್ನು ಸಹಿಸಲು ಸಾಧ್ಯವಿಲ್ಲಾ ನಮ್ಮ ಬೇಡಿಕೆ ಈಡೇರಿಕೆ ಮಾಡಲು ಸರ್ಕಾರ ಮುಂದಾಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರು ಪರಮೇಶಪ್ಪ ಮೇಲಗಮನಿ ಮಾತನಾಡಿ, ಸುಪ್ರೀಂಕೋರ್ಟ್ ತೀರ್ಪಿನ ತರುವಾಯ ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ಸರ್ಕಾರಗಳು ತುರ್ತು ನಿಗಾವಹಿಸಿ, ತಮ್ಮ ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಿ ಸಾಮಾಜಿಕ ನ್ಯಾಯವನ್ನು ಒದಗಿಸಿವೆ. ನಾಗಮೋಹನ್ ದಾಸ್ ಆಯೋಗಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷದಿಂದಾಗಿ ಆರು ತಿಂಗಳಾದರು ಸರಿಯಾದ ಮಾಹಿತಿಗಳು ಆಯೋಗಕ್ಕೆ ಬಂದಿಲ್ಲ. ಸರ್ಕಾರ ಕುಂಟು ನೆಪ ಹೇಳದೇ ಶೀಘ್ರವಾಗಿ ಒಳಮೀಸಲಾತಿ ಮಾಡಲು ಮುಂದಾಗಬೇಕು” ಎಂದರು.

ರಾಜ್ಯ ಸಂಘಟನಾ ಸಂಚಾಲಕರಾದ ಉಡಚಪ್ಪ ಮಾಳಗಿ ಹಾಗೂ ಜಿಲ್ಲಾಧ್ಯಕ್ಷರಾದ ನಾಗರಾಜ ಮಾಳಗಿ ಮಾತನಾಡಿ “ಸರ್ಕಾರ ಅಗಸ್ಟ್-15 ಒಳಗೆ ನಮ್ಮ ಬೇಡಿಕೆಯನ್ನು ಈಡೇರಿಸಲು ವಿಫಲವಾದರೆ, ನಮ್ಮ ಹಕ್ಕುಗಳಿಗಾಗಿ ಕರ್ನಾಟಕದಾದ್ಯಂತ ಇರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು, ಕಾರ್ಮಿಕರು, ವಕೀಲರು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ಒಗ್ಗೂಡಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದು ಅನಿವಾರ್ಯವಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರು ಹೊನ್ನಪ್ಪ ತಗಡಿನಮನಿ, ನೀಲಕಂಠಪ್ಪ ಕುಸನೂರ, ಪ್ರಕಾಶ ಪೂಜಾರ, ಅಶೋಕ ಮರೆಣ್ಣನವರ, ತಿರಕಪ್ಪ ಚಿಕ್ಕೇರಿ, ಬಿ ಆರ್ ಪುಟ್ಟಣ್ಣನವರ, ಸುಭಾಷ ಬೆಂಗಳೂರು, ಸಂತೋಷ ಗುಡ್ಡಪ್ಪನವರ, ಕರಿಯಪ್ಪ ಕಟ್ಟಿಮನಿ, ಮಲ್ಲೇಶ ಕುನ್ನೂರ ಅವರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಪರಿಸರ ಸಂರಕ್ಷಣೆಯಿಂದ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ: ಕೆ. ಎಫ್. ನಾಯ್ಕರ

ಈ ಸಂದರ್ಭದಲ್ಲಿ ಮುಖಂಡರಾದ ಮಾಲತೇಶ ಯಲ್ಲಾಪುರ,ಜಗದೀಶ ಹರಿಜನ, ಸುರೇಶ ಆಶಾದಿ,ಕೃಷ್ಣ ಕರ್ಜಗಿ,ಮಲ್ಲೇಶ ಕಡಕೋಳ,ಮಹೇಶ ಹರಿಜನ,ಸುಭಾಸ ಮಾಳಗಿ,ಸುನೀಲ ಬೇಟಗೇರಿ,ರಾಜು ಹರಿಜನ,ಶ್ರೀಮತಿ ರೇಣುಕಾ ಬಡಕ್ಕಣ್ಣನವರ,s ಹನಮಂತಪ್ಪ ಸಿ.ಡಿ,ಸುಮಂಗಲಾ ಕೃಷ್ಣಾಪುರ,ಮಾರುತಿ ಬಣಕಾರ,ಶ್ರೀಮತಿ ಗೀತಾ ಒಳಗುಂಡಿ,ಶ್ರೀಮತಿ ಗೀತಾ ಕಡೇಮನಿ,ಶ್ರೀಮತಿ ನೇತ್ರಾ ದೊಡ್ಡಮನಿ,ಶ್ರೀಮತಿ ಗೀತಾ ಹರಿಜನ,ನಾಗರಾಜ ಬಣಕಾರ,ಮಹೇಶಪ್ಪ ಹರಿಜನ,ಶ್ರೀಮತಿ ಯಲ್ಲಮ್ಮ ಕೊಪ್ಪದ,ನಾಗರಾಜ ಹಾವನೂರ,ಶೇಕಣ್ಣ ದಂಡಿನ,ಮಾಲತೇಶ ಹಲಬಗೊಂಡ,ಗುಡ್ಡಪ್ಪ ಬಣಕಾರ ಸೇರಿದಂತೆ ಜಿಲ್ಲೆಯ ಮುಖಂಡರು,ಯುವಕರು,ಮಹಿಳೆಯರು,ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X