ಹಾವೇರಿ | ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಕರವೇ ಮನವಿ

Date:

Advertisements

“ಗುತ್ತಲ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೀದಿ ನಾಯಿಗಳಿಂದ ಪಟ್ಟಣದ ಜನರಿಗೆ ಸಾಕಷ್ಟು ಸಮಸ್ಯೆಗಳು ಆಗುತ್ತಿವೆ. ಶಾಲಾ ಮಕ್ಕಳಿಗೆ, ಕೆಲಸಕ್ಕೆ ಹೋಗುವ ಜನರಿಗೆ, ಮಹಿಳೆಯರಿಗೆ, ವಾಹನ ಸವಾರರಿಗೆ, ಅಷ್ಟೇ ಅಲ್ಲದೇ ಎತ್ತು, ಎಮ್ಮೆ, ಆಕಳುಗಳ ಮೇಲೆ ದಾಳಿ ಮಾಡಿ ಕಚ್ಚುತ್ತಿವೆ. ಕೂಡಲೇ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು” ಎಂದು ಕರವೇ ಹಾವೇರಿ ತಾಲ್ಲೂಕು ಅಧ್ಯಕ್ಷ ಹಾಲೇಶ ಹಾಲಣ್ಣನವರ ಒತ್ತಾಯಿಸಿದರು.

ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ಗ್ರಾಮದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಬಿದಿನಾಯಿಗಳ ಸಂಖ್ಯೆ ಹಾಗೂ ಅವುಗಳಿಂದ ಆಗುತ್ತಿರುವ ಸಮಸ್ಯೆಗಳಿಗೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಗುತ್ತಲ ಪಟ್ಟಣದ ಮುಖ್ಯಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಬೀದಿ ನಾಯಿಗಳ ದಲಿಯಿಂದ ಸಾಕಷ್ಟು ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಇದರಿಂದಾಗಿ ಗುತ್ತಲ ಪಟ್ಟಣದ ಸಾರ್ವಜನಿಕರು, ಮಕ್ಕಳು ಭಯದಿಂದ ಓಡಾಡುವ ಪರಿಸ್ಥಿತಿ ಉಂಟಾಗಿದೆ” ಎಂದು ಹೇಳಿದರು.

Advertisements

“ಸರಕಾರಿ ಪ್ರಾಥಮಿಕ ಶಾಲೆಯ ಮುಂದೆ ಇರುವ ಚಿಕನ್ ಹಾಗೂ ಮೀನು ಮಾರುವ ಅಂಗಡಿಗಳ ಮುಂದೆ 40ಕ್ಕೂ ಹೆಚ್ಚು ಬೀದಿ ನಾಯಿಗಳು ಗುಂಪು ನಿಂತಿರುತ್ತವೆ. ಈ ವೇಳೆ ದಾರಿಯಲ್ಲಿ ಹೋಗುವ ಜನರಿಗೆ, ಮಹಿಳೆಯರಿಗೆ, ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚುತ್ತಿವೆ. ಇವುಗಳನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಬೇರೆ ಕಡೆ ಸ್ಥಳಾಂತರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಈ ಸಂದರ್ಭದಲ್ಲಿ  ಹಾವೇರಿ ತಾಲೂಕು ಅಧ್ಯಕ್ಷ ಹಾಲೇಶ್ ಹಾಲಣ್ಣನವರ, ಯುವ ಘಟಕದ ಅಧ್ಯಕ್ಷ ಫಕ್ರುದ್ದೀನ್ ಅಂಗಡಿಕಾರ, ಶೇಕಪ್ಪ ನರಸಣ್ಣವರ, ಕರಬಸ್ಸು ಕುರುಬಗೇರಿ, ನಿಂಗಪ್ಪ ಅಂಗೂರ, ಶಿವಲಿಂಗಪ್ಪ ಗೊರವರ ಹಾಗೂ ಪಟ್ಟಣದ ಸಾರ್ವಜನಿಕರು ಪಾಲ್ಗೊಂಡಿದ್ದರು

WhatsApp Image 2024 10 05 at 15.43.57 586b60ff min e1728123396595
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X