ನಟಿ ಹಾಗೂ ಮಾಜಿ ಸಂಸದೆ ರಮ್ಯಾ ವಿರುದ್ಧ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ, ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ರಮ್ಯಾ ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ ಅಂತ ನಟಿ ರಮ್ಯಾ ಪೋಸ್ಟ್ ಶೇರ್ ಮಾಡಿಕೊಂಡಿದ್ದರು. ಈ ಪೋಸ್ಟ್ ಬಳಿಕ ನಟಿ ವಿರುದ್ಧ ಡಿಬಾಸ್ ಫ್ಯಾನ್ಸ್ಗಳು ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದರು.
ಇದನ್ನು ಓದಿದ್ದೀರಾ? ನಟಿ ರಮ್ಯಾ ಬಗ್ಗೆ ಅವಹೇಳನಕಾರಿ ಸಂದೇಶ: 43 ಮಂದಿ ವಿರುದ್ಧ ಎಫ್ಐಆರ್ ದಾಖಲು
ನಟಿ ರಮ್ಯಾ ಅವರು, ಮಹಿಳಾ ಆಯೋಗ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ರಮ್ಯಾ ದೂರಿನ ಆಧಾರದ ಮೇಲೆ ಪ್ರಮೋದ ಗೌಡ ಎಂಬ ವ್ಯಕ್ತಿ ಸೇರಿ 43 ಅಕೌಂಟ್ಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಈ ಸಂಬಂಧ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಓರ್ವ ಆರೋಪಿ ಬಳ್ಳಾರಿ ಮೂಲದವರು, ಮತ್ತೋರ್ವ ಆರೋಪಿ ಚಿತ್ರದುರ್ಗ ಮೂಲದವರು ಎಂದು ಹೇಳಲಾಗಿದೆ.
