ರಾಜ್ಯದಲ್ಲಿ 3 ವರ್ಷಗಳಲ್ಲಿ 45,000 ಅಪ್ರಾಪ್ತೆಯರು ಗರ್ಭಿಣಿಯಾಗಿದ್ದಾರೆ

Date:

Advertisements

2020ರಿಂದ 2023ರವರೆಗೆ ರಾಜ್ಯದಲ್ಲಿ 45,000ಕ್ಕೂ ಹೆಚ್ಚು ಹದಿಹರೆಯದ ಹೆಣ್ಣುಮಕ್ಕಳು ಗರ್ಭಿಣಿಯರಾಗಿದ್ದಾರೆ. ಅವರಲ್ಲಿ ಕೆಲವರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಾಗಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರಿನ ಒಡನಾಡಿ ಸಂಸ್ಥೆಯು ಆರ್‌ಟಿಐ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪಡೆದ ಮಾಹಿತಿಯ ಪ್ರಕಾರ, 2020ರ ಜನವರಿಯಿಂದ 2023ರ ಜೂನ್‌ವರೆಗೆ 45,000ಕ್ಕೂ ಹೆಚ್ಚು ಅಪ್ರಾಪ್ತೆಯರು ಗರ್ಭ ಧರಿಸಿದ್ದಾರೆ. 2023ರ ಜನವರಿಯಿಂದ ಜೂನ್‌ ನಡುವೆಯೇ 2,736 ಬಾಲಕಿಯರು ಗರ್ಭಿಣಿಯಾರಾಗಿದ್ದಾರೆ.

2020ರಲ್ಲಿ 10,101, 2021ರಲ್ಲಿ 13,159 ಅಪ್ರಾಪ್ತೆಯರು ಗರ್ಭವತಿಯರಾಗಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಹದಿಹರೆಯದ ಅಪ್ರಾಪ್ತೆಯರಲ್ಲಿ ಗರ್ಭಧಾರಣೆಯು ದ್ವಿಗುಣಗೊಳ್ಳುತ್ತಿದೆ. ಬಾಲ್ಯ ವಿವಾಹ ಮತ್ತು ಅಪ್ರಾಪ್ತ ವಯಸ್ಸಿನಲ್ಲಿಯೇ ಗರ್ಭಿಣಿಯರಾಗುತ್ತಿರುವ ಕಾರಣ, ಬಾಲಕಿಯರು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಅಪ್ರಾಪ್ತ ವಯಸ್ಸಿನಲ್ಲಿ ಗರ್ಭ ಧರಿಸುವುದು ಅವರ ಜೀವಕ್ಕೂ ಅಪಾಯವಿದೆ. ಆದರೂ, ಈ ಬಗ್ಗೆ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ ಎಂದು ಒಡನಾಡಿ ಸಂಸ್ಥೆಯ ಸಹ ಸಂಸ್ಥಾಪಕ ಎಲ್‌ ಪರಶುರಾಮ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisements

“ತಾಯಿ ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ಎದುರಾಗುತ್ತಿದೆ. ಅಪ್ರಾಪ್ತ ತಾಯಂದಿರಿಗೆ ಮಗುವಿನ ಆರೈಕೆಯ ಬಗ್ಗೆ ಮಾರ್ಗದರ್ಶನದ ಅಗತ್ಯವಿರುತ್ತದೆ. ಬಾಲ್ಯದಲ್ಲಿಯೇ ಹೆಣ್ಣುಮಕ್ಕಳು ತಮ್ಮ ಜೀವನವನ್ನು ಕಳೆದುಕೊಳ್ಳುತ್ತಿದ್ದಾರೆ. ಆದರೂ, ರಾಜ್ಯ ಸರ್ಕಾರ ಇಂತಹ ಗಂಭೀರ ಸಮಸ್ಯೆಗಳನ್ನು ಪರಿಗಣಿಸುತ್ತಿಲ್ಲ. ವಿಧಾನಸಭೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ. ಅಪ್ರಾಪ್ತೆಯರನ್ನು ರಕ್ಷಿಸಲು ಕಾನೂನುಗಳನ್ನು ಅನುಷ್ಠಾನಗೊಳಿಸುತ್ತಿಲ್ಲ” ಎಂದು ಅವರು ಕಿಡಿಕಾರಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ದತ್ತಾಂಶದ ಪ್ರಕಾರ, 2020ರಿಂದ 2023ರ ಜೂನ್‌ವರೆಗೆ ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ಒಟ್ಟು 584 ಅಪ್ರಾಪ್ತ ಸಂತ್ರಸ್ತೆಯರಿಗೆ ಪರಿಹಾರ ನೀಡಲಾಗಿದೆ.

2020-21ರಲ್ಲಿ 219 ಅಪ್ರಾಪ್ತ ಸಂತ್ರಸ್ತರಿಗೆ 5.84 ಕೋಟಿ ರೂ. ಪರಿಹಾರವನ್ನು ನೀಡಲಾಗಿದೆ. 2021-22ರಲ್ಲಿ 187 ಸಂತ್ರಸ್ತರಿಗೆ 5.29 ಕೋಟಿ ರೂ. ಪರಿಹಾ ಪಾವತಿಸಲಾಗಿದೆ. 2022-2023ರ ಸಾಲಿನಲ್ಲಿ 178 ಸಂತ್ರಸ್ತರಿಗೆ 6.68 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಪ್ರಾಧಿಕಾರದ ದತ್ತಾಂಶಗಳು ತಿಳಿಸಿವೆ ಎಂದು ಪರಶುರಾಮ್ ವಿವರಿಸಿದ್ದಾರೆ.

ಬಾಲ್ಯ ವಿವಾಹ, ಅಪ್ರಾಪ್ತೆಯರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಕ್ರಮ ವಹಿಸಬೇಕು. ಹದಿಹರೆಯವರ ಮೇಲೆ ದೌರ್ಜನ್ಯ ಎಸಗುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪರಶುರಾಮ್ ಒತ್ತಾಯಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X