ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಿನ್ನಾಪುರ ಕ್ರಾಸ್ ಬಳಿ ಶುಕ್ರವಾರ ಸಂಜೆ ಕಟ್ಟಿಗೆ ತುಂಬಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಮನೆಯೊಂದರ ಮೇಲೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಅಪಘಾತದಿಂದ ಮನೆಗೆ ವ್ಯಾಪಕ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರಿನಿಂದ ದಾಂಡೇಲಿಗೆ ಕಟ್ಟಿಗೆ ಸಾಗಿಸುತ್ತಿದ್ದ ಲಾರಿ, ಹುಬ್ಬಳ್ಳಿ-ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿತ್ತು. ಚಿನ್ನಾಪುರ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯ ಪಕ್ಕದಲ್ಲಿದ್ದ ಸತೀಶ ಬಾಳ ನಾಯಕ ಎಂಬುವವರ ಮನೆಯ ಮೇಲೆ ಉರುಳಿ ಬಿದ್ದಿದೆ. ಲಾರಿ ಉರುಳಿದ ರಭಸಕ್ಕೆ ಮನೆಯ ಅಡುಗೆ ಕೋಣೆಯ ಗೋಡೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ.
ಈ ಸುದ್ದಿ ಓದಿದ್ದೀರಾ? ಹೊಸನಗರ | ನಾಗೋಡಿ ಬಳಿ ಬಸ್-ಟಿಪ್ಪರ್ ನಡುವೆ ಅಪಘಾತ

ಅಪಘಾತದ ಶಬ್ದ ಕೇಳಿದ ಕೂಡಲೇ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದರಿಂದ ದೊಡ್ಡ ದುರಂತ ತಪ್ಪಿದೆ. ಈ ಅಪಘಾತದಿಂದಾಗಿ ಮನೆಯ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಯಲ್ಲಾಪುರ ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.