ರಾಜ್ಯ ರಾಜಧಾನಿ ಬೆಂಗಳೂರಿನ ಲಾಲ್ ಬಾಗ್ ಸಸ್ಯಕಾಶಿಯಲ್ಲಿ ಪ್ರತಿ ಬಾರಿಯಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಬಾರಿ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಆಯೋಜಿಸಲಾಗಿದೆ.
ಉದ್ಯಾನವನಕ್ಕೆ ಲಕ್ಷಾಂತರ ಮಂದಿ ಭೇಟಿ ನೀಡಿ ಹಸಿರು ಸಿರಿಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ಬಾರಿ ₹2.5 ಕೋಟಿ ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ. ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ವಿಧಾನಸೌಧ ಮಾದರಿ ನಿರ್ಮಾಣ ಮಾಡಲಾಗಿದೆ. ಇದಕ್ಕೆ 8.2 ಲಕ್ಷ ವಿವಿಧ ತಳಿಯ ಪುಷ್ಪಗಳನ್ನು ಬಳಸಲಾಗಿದೆ. ಅದರ ಮುಂಭಾಗದಲ್ಲಿ ಕೆಂಗಲ್ ಹನುಮಂತಯ್ಯ ಅವರ 14 ಅಡಿ ಎತ್ತರದ ಪ್ರತಿಮೆಯು ನೋಡುಗರನ್ನು ಸೆಳೆಯುತ್ತಿದೆ. ಲಕ್ಷಾಂತರ ಜನ ಸಸ್ಯಕಾಶಿಗೆ ಭೇಟಿ ನೀಡಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸ ಪಡುತ್ತಿದ್ದಾರೆ.
ಲಾಲ್‌ಬಾಗ್ ಫಲಪಷ್ಪ ಪ್ರದರ್ಶನದ ಕೆಲವು ಫೋಟೊಗಳು ಇಂತಿವೆ.