ಅತ್ಯಾಚಾರ ಪ್ರಕರಣ | ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ

Date:

Advertisements

47 ವರ್ಷದ ಮನೆಕೆಲಸದ ಮಹಿಳೆಯ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.

ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶುಕ್ರವಾರ ಪ್ರಜ್ವಲ್‌ರನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿ, ಶಿಕ್ಷೆಯ ಪ್ರಮಾಣವನ್ನು ಶನಿವಾರಕ್ಕೆ ಕಾಯ್ದಿರಿಸಲಾಗಿತ್ತು. ನ್ಯಾಯಾಧೀಶರಾದ ಸಂತೋಷ್‌ ಗಜಾನನ್‌ ಭಟ್‌ ಅವರು ಶನಿವಾರ ಎರಡೂ ಪಕ್ಷಕಾರರ ನಡುವಿನ ವಾದಗಳನ್ನು ಆಲಿಸಿ ಶಿಕ್ಷೆಯ ಪ್ರಮಾಣ ನಿಗದಿ ಪಡಿಸಿ ತೀರ್ಪು ನೀಡಿದರು.

ಪ್ರಜ್ವಲ್‌ ರೇವಣ್ಣಗೆ 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಹಾಗೆಯೇ ಇದರಲ್ಲಿ ಸಂತ್ರಸ್ತೆಗೆ ಏಳು ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಶನಿವಾರ ಬೆಳಗಿನ ವಿಚಾರಣೆಯಲ್ಲಿ ಪ್ರಾಸಿಕ್ಯೂಷನ್‌ ಪರ ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ್‌ ನಾಯಕ್‌ ಮತ್ತು ಬಿ ಎನ್‌ ಜಗದೀಶ್‌ ಹಾಗೂ ಪ್ರಜ್ವಲ್‌ ಪರ ಹಿರಿಯ ವಕೀಲೆ ನಳಿನಾ ಮಾಯೇಗೌಡ ಅವರ ವಾದ ಮಂಡಿಸಿದರು. ಅಂತಿಮವಾಗಿ ಪ್ರಜ್ವಲ್‌ಗೂ ತಮ್ಮ ಅನಿಸಿಕೆ ಹೇಳಿಕೊಳ್ಳಲು ನ್ಯಾಯಾಲಯ ಅವಕಾಶ ಕಲ್ಪಿಸಿತು.

ಈ ಸಂದರ್ಭದಲ್ಲಿ ಪ್ರಜ್ವಲ್‌ “ನಾನು ಒಮ್ಮೆ ಸಂಸದನಾಗಿ ಕೆಲಸ ಮಾಡಿದ್ದೇನೆ. ಸಂಸದನಾಗಿದ್ದಾಗ ನಾನು ಅತ್ಯಾಚಾರ ಮಾಡಿದ್ದೇನೆ ಎಂದು ಯಾರೂ ಆರೋಪಿಸಿರಲಿಲ್ಲ. ಆದರೆ, ಚುನಾವಣೆಯ ಸಂದರ್ಭದಲ್ಲಿ ಈ ಆರೋಪ ಮಾಡಿದ್ದಾರೆ. ಸಂಸದನಾಗಿ ಉತ್ತಮ ಕೆಲಸ ಮಾಡಿದ್ದೇನೆ. ಆರು ತಿಂಗಳಿಂದ ತಂದೆ-ತಾಯಿಯನ್ನು ನೋಡಿಲ್ಲ. ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಪದವೀಧರನಾದ ನಾನು ಮೆರಿಟ್‌ ವಿದ್ಯಾರ್ಥಿ. ರಾಜಕೀಯದಲ್ಲಿ ನಾನು ಬೇಗ ಬೆಳೆದಿದ್ದು, ನನಗೆ ಮುಳುವಾಯಿತು” ಎಂದು ಗದ್ಗದಿತರಾದರು.

ಪ್ರಾಸಿಕ್ಯೂಷನ್‌ ಪರ ಬಿ ಎನ್‌ ಜಗದೀಶ್‌ ಅವರು, “ಜೀವನೋಪಾಯಕ್ಕಾಗಿ ಮನೆಕೆಲಸಕ್ಕೆ ಸೇರಿದ ಅನಕ್ಷರಸ್ಥೆಯ ಮೇಲೆ ಪ್ರಜ್ವಲ್‌ ಪದೇಪದೇ ಪ್ರಜ್ವಲ್‌ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ವೇಳೆ ಸೆರೆ ಹಿಡಿದಿರುವ ವಿಡಿಯೋಗಳು ವೈರಲ್‌ ಆಗುತ್ತಿದ್ದಂತೆ ಸಂತ್ರಸ್ತೆ ಮಾನಸಿಕವಾಗಿ ಹಿಂಸೆ ಅನುಭವಿಸಿ, ಆತ್ಮಹತ್ಯೆ ಪ್ರಯತ್ನವನ್ನೂ ಮಾಡಿದ್ದರು. ಸಾಕಷ್ಟು ಮಹಿಳೆಯರ ಅಶ್ಲೀಲ ದೃಶ್ಯಗಳನ್ನು ಪ್ರಜ್ವಲ್‌ ವಿಡಿಯೋ ಮಾಡಿದ್ದಾನೆ. ಈತ ಚಟಗಾರನಾಗಿದ್ದು, ಆತನ ವಿರುದ್ದ ಇನ್ನೂ ಮೂರು ಅತ್ಯಾಚಾರ ಪ್ರಕರಣ ಬಾಕಿ ಇವೆ. ಹೀಗಾಗಿ, ಪ್ರಜ್ವಲ್‌ಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಸಮಾಜಕ್ಕೆ ಸಂದೇಶ ರವಾನಿಸಬೇಕು” ಎಂದು ಕೋರಿದ್ದರು.

ಐಪಿಸಿ ಸೆಕ್ಷನ್ 376(2)(k) ಹಾಗೂ 376 (2)(n) ಅಡಿ ತೀರ್ಪು ಪ್ರಕಟಿಸಲಾಗಿದ್ದು, ಜೀವನ ಪರ್ಯಂತ ಜೈಲು ಶಿಕ್ಷೆಯನ್ನು ಪ್ರಜ್ವಲ್ ಅನುಭವಿಸಬೇಕಿದೆ. ಅತ್ಯಾಚಾರದ 2 ಸೆಕ್ಷನ್​​​ಗಳ ಅಡಿ ಒಟ್ಟು 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದರಲ್ಲಿ 7 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು ಎಂದು ಜಡ್ಜ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರವೆಸಗಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡಿರುವ ಆರೋಪ ಸಂಬಂಧ ಮೂರು ಪ್ರತ್ಯೇಕ ಪ್ರಕರಣಗಳು ಇನ್ನೂ ವಿಚಾರಣಾ ಹಂತದಲ್ಲಿ ಇವೆ. ಅವುಗಳ ತೀರ್ಪು ಇನ್ನಷ್ಟೇ ಹೊರಬೀಳಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

Download Eedina App Android / iOS

X