ಬೈಕ್ ಮೇಲೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಔರಾದ್ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತರಿಂದ ₹6.76ಲಕ್ಷ ಮೌಲ್ಯದ 6ಕೆ.ಜಿ 762 ಗ್ರಾಂ ತೂಕದ ಗಾಂಜಾ ಜೊತೆಗೆ ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತಾಲೂಕಿನ ವಡಗಾಂವ (ದೆ) ಗ್ರಾಮದ ಹೊರವಲಯದ ಚಿಂತಾಕಿ ರಸ್ತೆಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ದ್ವಿಚಕ್ರ ಮೇಲೆ ಇಬ್ಬರು ತೆರಳುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಸಂತಪೂರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.
ಪಿಎಸ್ಐ ನಂದಕುಮಾರ ಹಾಗೂ ಪತ್ರಾಂಕಿತ ಅಧಿಕಾರಿ ಡಾ.ಗಾಯತ್ರಿ ವಿಜಯಕುಮಾರ ನೇತೃತ್ವದಲ್ಲಿ ದಾಳಿ ನಡೆಯಿತು. ಈ ವೇಳೆ ಠಾಣೆಯ ಸಿಬ್ಬಂದಿ ಮತ್ತಿತರರಿದ್ದರು.
ಇದನ್ನೂ ಓದಿ : ಬೀದರ್ | ಸ್ಥಳಾಂತರಗೊಂಡ ಜಿಲ್ಲಾಧಿಕಾರಿ ಕಚೇರಿಗೆ ಬಸ್ ಓಡಿಸಿ