ಗದಗ | ಸಂಗ್ರಹಿಸಿದ ಶುಲ್ಕ ಬೀದಿ ಬದಿ ವ್ಯಾಪಾರಸ್ಥರಿಗೆ ಸದ್ಭಳಕೆಯಾಗಲಿ: ಸಚಿವ ಎಚ್ ಕೆ ಪಾಟೀಲ

Date:

Advertisements

“ಸರ್ಕಾರದ ಕಾನೂನು ಹಾಗೂ ಮಾರ್ಗಸೂಚಿಯನ್ವಯ ಬೀದಿ ಬದಿ ವ್ಯಾಪಾರಸ್ಥರಿಂದ ಸಂಗ್ರಹಿಸುವ ಶುಲ್ಕ ನಿಗದಿತವಾಗಿರಲಿ.ಸಂಗ್ರಹಿಸಿದ ಶುಲ್ಕ ಪುನ: ಬೀದಿ ಬದಿ ವ್ಯಾಪಾರಸ್ಥರಿಗೆ ಸದ್ಭಳಕೆಯಾಗಲಿ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗದಗ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಏರ್ಪಡಿಸಲಾದ ಗದಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಜರುಗಿದ ಸಭೆಯ ಅಧ್ಯಕ್ಷತೆವಹಿಸಿ ಸಚಿವರು ಮಾತನಾಡಿದರು.

“ಬೀದಿ ಬದಿ ವ್ಯಾಪಾರಸ್ಥರಿಂದ ಸಂಗ್ರಹಿಸಿದ ಶುಲ್ಕ ಮತ್ತು ಹಣದ ಕ್ರೂಢೀಕರಣ ಸರಿಯಾಗಿ ಸದ್ಭಳಕೆ  ಆಗುತ್ತಿಲ್ಲವೆಂದು ದೂರುಗಳು ಬರುತ್ತಿವೆ. ಸರ್ಕಾರದ ಮಾರ್ಗಸೂಚಿಗಳನ್ವಯ ಸಂಗ್ರಹಿಸಿದ ಶುಲ್ಕದ ಮೊತ್ತ ಸರಿಯಾಗಿ ಅರ್ಹರಿಗೆ ಸದ್ಭಳಕೆಯಾಗಬೇಕು” ಎಂದು ಸೂಚಿಸಿದರು.

Advertisements

ಸಭೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ತಮ್ಮ ಹಲವಾರು ಸಮಸ್ಯೆಗಳ ಕುರಿತು ಹಾಗೂ ಶುಲ್ಕ ಸಂಗ್ರಹಣೆ ಕುರಿತು ಸಮಿತಿ ರಚಿಸುವ ಕುರಿತು ಸಚಿವ ಗಮನಕ್ಕೆ ತಂದರು. 

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಎಚ್.ಕೆ.ಪಾಟೀಲ ಅವರು “ಜಿಲ್ಲಾಧಿಕಾರಿಗಳ ಮೂಲಕ ಬೀದಿಬದಿ ವ್ಯಾಪಾರಸ್ಥರ ಶುಲ್ಕ ಸಂಗ್ರಹಣೆ ಹಾಗೂ ಸಂಗ್ರಹಿಸಿದ ಶುಲ್ಕ ಸದ್ಭಳಕೆ ಮಾಡುವ ಕುರಿತಂತೆ ಸರ್ಕಾರದ ಸಂಪೂರ್ಣ ಮಾರ್ಗಸೂಚಿಗಳೊಂದಿಗೆ ಜಿಲ್ಲೆಯ ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ತಿಳಿಸುವ” ಸೂಚನೆ ನೀಡಿದರು.

“ಅಲ್ಲದೇ ಪಟ್ಟಣ ಮೇಲುಸ್ತುವಾರಿ ಸಮಿತಿ ಸಭೆಯನ್ನು 2-3 ದಿನಗಳೊಳಗಾಗಿ, ಕುಂದುಕೊರತೆ ಸಮಿತಿ ಮತ್ತು ಟಿವಿಸಿ ಸಮಿತಿ ಸಭೆಯನ್ನು 5 ದಿನಗಳೊಳಗಾಗಿ ರಚಿಸುವಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ” ಸಚಿವರು ಸೂಚಿಸಿದರು.

“ಬೀದಿ ಬದಿ ವ್ಯಾಪಾರಸ್ಥರೂ ಸಹ ಗೌರವಯುತವಾಗಿ ಸಮಾಜದಲ್ಲಿ ಎಲ್ಲರಂತೆ ಜೀವನ ಸಾಗಿಸಬೇಕು. ಇದಕ್ಕಾಗಿ ಈಗಾಗಲೇ ಗದಗಿನಲ್ಲಿ ವ್ಯಾಪಾರಸ್ಥರಿಗೆ ತಳ್ಳುವ ಹೈಟೆಕ್ ಗಾಡಿ, ನೆರಳಿಗಾಗಿ ಕೊಡೆ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡಲಾಗಿದೆ. ಇವುಗಳ ಸದ್ಭಳಕೆಯೊಂದಿಗೆ ಆರ್ಥಿಕವಾಗಿ ಬೀದಿ ಬದಿ ವ್ಯಾಪಾರಸ್ಥರು ಸಹ ಸಬಲರಾಗಬೇಕು” ಎಂದು ಹೇಳಿದರು.

“ಬೀದಿ ಬದಿ ವ್ಯಾಪಾರಸ್ಥರು ಹಾಗೂ ಸಂಘದ ಪದಾಧಿಕಾರಿಗಳು ಸರ್ಕಾರಿ ಕಚೇರಿಗೆ ಅಧಿಕಾರಿಗಳನ್ನು ಭೇಟಿ ಮಾಡಲು ಬಂದಾಗ ಅಧಿಕಾರಿಗಳು ಅವರೊಂದಿಗೆ ಸಂಯಮದಿಂದ ಗೌರವಯುತವಾಗಿ ನಡೆದುಕೊಳ್ಳಬೇಕು. ಯಾವುದೇ ತರಹದ ದರ್ಪ, ಕಠೋರ ವರ್ತನೆ ಸಹಿಸಲಾಗದು” ಎಂದರು.

ಬೀದಿ ಬದಿ ವ್ಯಾಪಾರಸ್ಥರಿಗಾಗಿಯೇ ಕಾನೂನು ರೂಪಿಸಲಾಗಿದೆ. ಕಾನೂನು ರಾಜ್ಯದಲ್ಲಿ ಜಾರಿಯಾಗಲು ವಿಳಂಬವಾಗಿರಬಹುದು. ಆದರೆ ಗದಗ ಜಿಲ್ಲೆಯಲ್ಲಿ ಕಾನೂನು ಅನುಷ್ಟಾನ ಆಗಬೇಕು. ಅಗಸ್ಟ 15 ರಿಂದ ಕಾನೂನು ಸರಿಯಾಗಿ ಸಮರ್ಪಕವಾಗಿ ಅನುಷ್ಟಾನ ಆಗಲಿದೆ” ಎಂದು ತಿಳಿಸಿದರು.

“ಬೀದಿ ಬದಿ ವ್ಯಾಪಾರಸ್ಥರಿಂದ ಸಂಗ್ರಹಿಸಿದ ಶುಲ್ಕ ಸದ್ಭಳಕೆಯಾಗದೇ ಸರ್ಕಾರಕ್ಕೆ ಮರಳಿ ಹೋಗಿದೆ ಎಂದು ವ್ಯಾಪಾರಸ್ಥರು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಈ ವಿಷಯದ ಕುರಿತು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ ನಿಜವಾಗಿಯೂ ಅನುದಾನ ಅಪವ್ಯಯ ಅಥವಾ ಮರಳಿ ಹೋಗಿದ್ದರೆ ಅದಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ವಹಿಸುವಂತೆ” ಸೂಚಿಸಿದರು. ಅಲ್ಲದೇ ಸರ್ಕಾರಕ್ಕೆ ಮರಳಿ ಹೋಗಿರುವ ಅನುದಾನವನ್ನು ಮರಳಿ ತರಲು ಕ್ರಮ ಕೈಗೊಳ್ಳಲು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ನ್ಯಾನೊ ರಸಗೊಬ್ಬರ ಬಳಕೆ ಹೆಚ್ಚುತ್ತಿದ್ದು, ಕಾಳುಗೊಬ್ಬರ ಮಿತವಾಗಿ ಬಳಸಿ: ಜಿಲ್ಲಾಧಿಕಾರಿ ಸೂಚನೆ

ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ, ನಗರಾಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಅಶೋಕ ಮಂದಾಲಿ, ಪ್ರಭು ಬುರಬುರೆ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ, ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ ಬಸವರಾಜ ಮಲ್ಲೂರ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಬೀದಿ ಬದಿ ವ್ಯಾಪಾರಸ್ಥರ ಸಂಘಗಳ ಪದಾಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X