ಮುಸ್ಲಿಂ ಶಿಕ್ಷಕನ ವರ್ಗಾವಣೆಗೆ ಸಂಚು, ನೀರಿನ ಟ್ಯಾಂಕ್​​ಗೆ ವಿಷ ಬೆರೆಸಿದ ಶ್ರೀರಾಮಸೇನೆ ಮುಖಂಡ: ಸಿಎಂ ಆಕ್ರೋಶ

Date:

Advertisements

ಸರ್ಕಾರಿ ಶಾಲೆಯ ಮುಸ್ಲಿಂ ಮುಖ್ಯ ಶಿಕ್ಷಕರನ್ನು ವರ್ಗಾವಣೆ ಮಾಡಿಸಬೇಕೆಂದು ಸಂಚು ರೂಪಿಸಿದ್ದ ಶ್ರೀರಾಮಸೇನೆಯ ಕೋಮುವಾದಿ ದುರುಳರು ಶಾಲೆಯ ನೀರಿನ ಟ್ಯಾಂಕ್‌ ವಿಷ ಹಾಕಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, “ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ | ಮುಸ್ಲಿಂ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್​​ಗೆ ವಿಷ ಹಾಕಿದ ಕೋಮುವಾದಿ ದುರುಳರು

Advertisements

“ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ. ‘ದಯೆಯೇ ಧರ್ಮದ ಮೂಲವಯ್ಯ’ ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ” ಎಂದು ಸಿಎಂ ಆತಂಕ ವ್ಯಕ್ತಪಡಿಸಿದ್ದಾರೆ.

“ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ‌ ಆತ್ಮವಿಮರ್ಷೆ ಮಾಡಿಕೊಳ್ಳಲಿ. ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ವಿಜಯೇಂದ್ರ ಹೊರುವರೇ? ಆರ್.ಅಶೋಕ್ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಎಲ್ಲ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ. ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ. ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು” ಎಂದು ಸಿಎಂ ಕರೆ ನೀಡಿದ್ದಾರೆ.

“ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ. ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ” ಎಂದು ಸಿಎಂ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X