ಹಾವೇರಿ ಬ್ಯಾಡಗಿ ತಾಲೂಕು ಮೊಟೇಬೆನ್ನೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂತನವಾಗಿ ನಿರ್ಮಿಸಲಾದ ಮೇಲ್ಸೇತುವೆ ಲೋಕರ್ಪಾಣೆ ಶನಿವಾರ ಜರುಗಿತು.
ಮೇಲ್ಲೇತುವೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಮಾಜಿ ಮುಖ್ಯ ಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರು. “ಈ ಮೇಲ್ಲೇತುವೆ ಉದ್ಘಾಟನೆಯಿಂದ ವಾಹನ ಸಂಚಾರಕ್ಕೆ ಅನೂಕಲವಾಗಲಿದೆ. 15 ರಿಂದ 20 ದಿನದೊಳಗಾಗಿ ಸೇವಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟನೆಗೆ ಸಿದ್ಧಗೊಳ್ಳಲಿವೆ ಎಂದು ಗುತ್ತಿಗೆದಾರರು ಮಾಹಿತಿ ನೀಡಿದ್ದಾರೆ” ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ ಅವರು, “ರಸ್ತೆ ಎರಡು ಬದಿಯಲ್ಲಿ ಸಿಸಿ ಕ್ಯಾಮರಾ ಅಳವಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳಿಗೆ ನಿರ್ದೇಶನ” ನೀಡಿದರು.
ಈ ಸುದ್ದಿ ಓದಿದ್ದೀರಾ? ಗದಗ | ಯೂರಿಯಾ ಗೊಬ್ಬರಕ್ಕಾಗಿ ರಾಷ್ಟೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತದ್ದರು.