ಸಕಲೇಶಪುರ | ಭಾರೀ ಮಳೆಯಿಂದ ಮಂಜರಾಬಾದ್ ಕೋಟೆಯ ಒಂದು ಭಾಗ ಕುಸಿತ: ಪುರಾತತ್ವ ಇಲಾಖೆ ನಿರ್ಲಕ್ಷ್ಯ

Date:

Advertisements

ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿರುವ ನಕ್ಷತ್ರಾಕಾರದ ಮಂಜರಾಬಾದ್ ಕೋಟೆಯ ಒಂದು ಭಾಗ ಕುಸಿದಿದೆ.

ಕೋಟೆಯ ಒಳಭಾಗದ ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದು ಬಿದ್ದಿದೆ.
ತಡರಾತ್ರಿ ಈ ಘಟನೆ ಸಂಭವಿಸಿದ್ದು, ಮುಂಜಾನೆ ಕೋಟೆಯ ಕಾವಲುಗಾರ ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಬಂದಾಗ ಬೆಳಕಿಗೆ ಬಂದಿದೆ.

ನಕ್ಷತ್ರ ಆಕಾರದಲ್ಲಿರುವ ಮಂಜರಾಬಾದ್ ಕೋಟೆ ಪ್ರವಾಸಿಗರನ್ನು ಆಕರ್ಷಿಸುತ್ತದೆ. ನಿತ್ಯವೂ ನೂರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಮಂಜರಾಬಾದ್ ಕೋಟೆಯನ್ನು ಟಿಪ್ಪು ಸುಲ್ತಾನ್ 1785ರಲ್ಲಿ ನಿರ್ಮಾಣ ಮಾಡಿ 1792ರಲ್ಲಿ ಪೂರ್ಣಗೊಳಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಕಾರವಾರದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಿಸುವಂತೆ ಜಿಲ್ಲಾಧಿಕಾರಿಗೆ ಮನವಿ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಕೇಂದ್ರದಿಂದ 5 ಕಿ.ಮೀ. ಅಂತರದಲ್ಲಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಅಡಾಣಿ ಗುಡ್ಡದ ಮೇಲೆ ಈ ಕೋಟೆ ರಚಿತಗೊಂಡಿದೆ.

ಮಂಜರಾಬಾದ್‌ ಕೋಟೆ ಕುಸಿತ

ಸಮುದ್ರಮಟ್ಟದಿಂದ ಈ ಕೋಟೆಯು 988 ಮೀಟರ್ ಎತ್ತರದಲ್ಲಿದೆ. ಅಂದರೆ 3393 ಅಡಿಗಳು. 252 ಮೆಟ್ಟಿಲುಗಳನ್ನು ಏರಿದರೆ ಸಿಗುವ ಈ ಕೋಟೆಯು ನಕ್ಷತ್ರಾಕಾರದ ರಚನೆಯುಳ್ಳ ವಿಶಿಷ್ಟ ತಂತ್ರವನ್ನೊಳಗೊಂಡಿದೆ. 1956ರಲ್ಲಿ ಪುರಾತತ್ವ ಇಲಾಖೆಯು ಈ ಕೋಟೆಯ ಸಂರಕ್ಷಣಾ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು. ಆದರೆ ಸರ್ಕಾರಗಳ ನಿರ್ಲಕ್ಷ್ಯದಿಂದ ಐತಿಹಾಸಿಕ ಕೋಟೆಯು ಕಳೆಗುಂದುತ್ತಿದ್ದು, ತನ್ನ ಇತಿಹಾಸವನ್ನು ಮರಮಾಚುವಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X