ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬೆಳಗಾವಿ ನ್ಯಾಯಾಲಯವು ಶನಿವಾರ ಅಪರಾಧಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.
ಕಣಬರ್ಗಿ ಗ್ರಾಮದ ದತ್ತಾತ್ರೇಯ ಖಾನಾಪುರೆ ಶಿಕ್ಷೆಗೆ ಒಳಗಾದವ. 2019ರ ಮೇ 13ರಂದು ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ. ಬಳಿಕ ಬಾಲಕಿಯ ಪೋಷಕರು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ ಅವರು, ಸಂತ್ರಸ್ತೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ನೀಡುವಂತೆ ಹಾಗೂ ಆ ಮೊತ್ತವನ್ನು 5 ವರ್ಷಗಳವರೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಠೇವಣಿಯಾಗಿ ಇಡುವಂತೆ ಆದೇಶಿಸಿದರು.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಮುಸ್ಲಿಂ ಧರ್ಮದ ಶಿಕ್ಷಕನನ್ನು ವರ್ಗಾವಣೆ ಮಾಡಲು ಮಕ್ಕಳು ಕುಡಿಯುವ ನೀರಿಗೆ ವಿಷ ಬೆರೆಸಿದ ಪಾಪಿಗಳು
ತನಿಖಾಧಿಕಾರಿಗಳಾದ ಜಗದೀಶ ಹಂಚಿನಾಳ ಮತ್ತು ಬಿ.ಆರ್. ಗಡೇಕರ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ. ಪಾಟೀಲ ವಾದ ಮಂಡಿಸಿದರು.