ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ದಿವಂಗತ ಮುಖ್ತಾರ್ ಅನ್ಸಾರಿ ಕಿರಿಯ ಪುತ್ರ ಉಮರ್ ಅನ್ಸಾರಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ತಂದೆಯ ವಶಪಡಿಸಿಕೊಂಡ ಆಸ್ತಿಗಳನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿದ ಆರೋಪದ ಮೇಲೆ ಉಮರ್ ಅನ್ಸಾರಿ ಬಂಧನ ಮಾಡಲಾಗಿದೆ. ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ ಆಸ್ತಿಯನ್ನು ಉತ್ತರ ಪ್ರದೇಶ ದರೋಡೆಕೋರರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಆಸ್ತಿಯನ್ನು ಅನ್ಸಾರಿ ಪುತ್ರ ಉಮರ್ ಮರಳಿ ಪಡೆಯುವ ನಿಟ್ಟಿನಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇನ್ನು ಅನ್ಸಾರಿ ಈ ವರ್ಷದ ಮಾರ್ಚ್‌ನಲ್ಲಿ ಉತ್ತರ ಪ್ರದೇಶದ ಬಂಡಾದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
