ಜಾರ್ಖಂಡ್ನ ಮುಖ್ಯಮಂತ್ರಿಯಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದ್ದ ಹಿರಿಯ ಬುಡಕಟ್ಟು ನಾಯಕ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೇನ್ ಸೋಮವಾರ ನಿಧನರಾಗಿದ್ದಾರೆ.
ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಜಾರ್ಖಂಡ್| ಶಿಬು ಸೊರೇನ್ ಸೊಸೆಯಂದಿರ ನಡುವೆ ಲೋಕಸಭೆ ಚುನಾವಣೆ ಜಿದ್ದಾಜಿದ್ದಿ
ಈ ಬಗ್ಗೆ ಶಿಬು ಸೊರೇನ್ ಅವರ ಪುತ್ರ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿ ದೃಢಪಡಿಸಿದ್ದಾರೆ. ಶಿಬು ಅವರು ಜೂನ್ ಕೊನೆಯ ವಾರದಲ್ಲಿ ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.
आदरणीय दिशोम गुरुजी हम सभी को छोड़कर चले गए हैं।
— Hemant Soren (@HemantSorenJMM) August 4, 2025
आज मैं शून्य हो गया हूँ…
‘ಗುರೂಜಿ’ ಎಂದೇ ಪ್ರಸಿದ್ಧರಾದ ಸೊರೇನ್ ಅವರು ಪ್ರತ್ಯೇಕ ಜಾರ್ಖಂಡ್ ರಾಜ್ಯಕ್ಕಾಗಿ ನಡೆದ ಚಳವಳಿಯಲ್ಲಿ ಪ್ರಮುಖ ವ್ಯಕ್ತಿ. ಬುಡಕಟ್ಟು ಮತ್ತು ಹಿಂದುಳಿದ ಸಮುದಾಯಗಳ ಹಕ್ಕುಗಳನ್ನು ಪ್ರತಿಪಾದಿಸುತ್ತಾ ಸಂಘಟನೆ ಕಟ್ಟಿಕೊಂಡರು. ದಶಕಗಳ ಕಾಲ ಜಾರ್ಖಂಡ್ ಮತ್ತು ದೇಶದ ರಾಜಕೀಯದಲ್ಲಿ ಪ್ರಮುಖ ಶಕ್ತಿ ಎಂದು ಗುರುತಿಸಿಕೊಂಡಿದ್ದರು.
