ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆಕೋಡಿಯ ಹಳ್ಳದಲ್ಲಿ 19 ನವಿಲುಗಳು ಸಾವನೊಪ್ಪಿರುವ ಘಟನೆ ನಡೆದಿದೆ.

ಐದು ಗಂಡು ಹಾಗೂ 14 ಹೆಣ್ಣು ನವಿಲುಗಳು ಎಂದು ದೃಢಪಡಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ. ನವಿಲುಗಳ ನಿಗೂಢ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸತ್ತ ನವಿಲುಗಳನ್ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವಿಧಿ ವಿಜ್ಞಾನ ಕೇಂದ್ರದಿಂದ ವರದಿ ಬಂದ ನಂತರವಷ್ಟೇ ನವಿಲುಗಳ ಸಾವಿಗೆ ಕಾರಣ ಗೊತ್ತಾಗಲಿದೆ.
ಅರಣ್ಯ ಇಲಾಖೆಯ ಎಸಿಎಫ್ ಮಲ್ಲಿಕಾರ್ಜುನ್, ವಲಯ ಅರಣ್ಯ ಅಧಿಕಾರಿ ಸುರೇಶ್ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.